ಸೇಡಂ: ತಾಲ್ಲೂಕಿನ ಹೂಡಾ(ಬಿ) ಗ್ರಾಮದಲ್ಲಿ ವಾಂತಿ-ಭೇದಿಯಿಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸೇರಿ ಏಳು ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಮಮತಾ ಹಣಮಂತ ಜೋಗುರ (5) ಎಂಬ ಮಗು ಮೃತಪಟ್ಟಿದೆ. ಗ್ರಾಮದಲ್ಲಿ ಪೂರೈಕೆಯಾಗುವ ಕಲುಷಿತ ನೀರು ಕುಡಿದು ಮಗು ಮೃತಪಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಮಗು ಮೃತಪಟ್ಟಿದ್ದು, ಸಾವಿಗೆ ಕಾರಣ ನಿಖರವಾಗಿ ಹೇಳಲಾಗುವುದಿಲ್ಲ ಎನ್ನುತ್ತಾರೆ ಆಸ್ಪತ್ರೆಯ ವೈದ್ಯರು. ಬುಧವಾರ ನಸುಕಿನ ಜಾವ ಗ್ರಾಮಸ್ಥರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಹೂಡಾ(ಬಿ) ಗ್ರಾಮದ ಮಳಖೇಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಬಸಣ್ಣ ಜಮಾದರ, ಐವರು ಮಕ್ಕಳು ಸೇರಿದಂತೆ ಒಟ್ಟು ಏಳು ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಳಖೇಡನ ಸಮುದಾಯ ಆರೋಗ್ಯ ಕೇಂದ್ರದಲ್ಲಿ 6 ಜನ ದಾಖಲಾಗಿ ಚಿಕಿತ್ಸೆ ಪಡೆದು, ಮನೆಗೆ ಮರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಗ್ರಾಮಕ್ಕೆ ಅಧಿಕಾರಿಗಳ ಭೇಟಿ:

ವಾಂತಿ-ಭೇದಿ ಪ್ರಕರಣ ಕಾಣಿಸಿಕೊಂಡ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚನ್ನಪ್ಪ ರಾಯಣ್ಣನವರ್ ನೇತೃತ್ವದಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನೀರಿನ ವ್ಯವಸ್ಥೆ ಪರಿಶೀಲಿಸಿದರು.

ಜಿಲ್ಲಾ ಆಸ್ಪತ್ರೆಗೆ ಮಾಜಿ ಶಾಸಕ ತೇಲ್ಕೂರ ಭೇಟಿ:

‘ಸೇಡಂ ತಾಲ್ಲೂಕಿನ ಹೂಡಾ (ಬಿ) ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಕ್ಕೆ ತಾಲ್ಲೂಕು ಆಡಳಿತದ ದಿವ್ಯ ನಿರ್ಲಕ್ಷವೇ ಕಾರಣ’ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆರೋಪಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಅವರು, ‘ಜಿಮ್ಸ್ ವೈದ್ಯಾಧಿಕಾರಿ ಡಾ.ಶಿವಕುಮಾರ ಅವರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸೆ ನೀಡುವಂತೆ ತಿಳಿಸಿದ್ದಾರೆ. ಕುಡಿಯುವ ನೀರಿನಿಂದ ಈ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ. ಗ್ರಾಮೀಣ ಭಾಗದ ಜನರ ಆರೋಗ್ಯದ ಕುರಿತು ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲದಂತೆ ಕಾಣುತ್ತಿದೆ’ ಎಂದು ಕಿಡಿಕಾರಿದರು.

ಸಚಿವ ಡಾ.ಶರಣಪ್ರಕಾಶ ನಾಪತ್ತೆ: ‘ಕಳೆದ ಎರಡು ದಿನಗಳಿಂದ ಜನರು ಅನಾರೋಗ್ಯದಿಂದ ಆತಂಕಪಡುತ್ತ ಆಸ್ಪತ್ರೆಗೆ ದಾಖಲಾಗುತ್ತಿದ್ದರೆ, ಕ್ಷೇತ್ರದ ಶಾಸಕರು, ಸಚಿವ ಡಾ.ಶರಣಪ್ರಕಾಶ ಪಾಟೀಲ ತಲೆ ಕೆಡಿಸಿಕೊಳ್ಳದಂತೆ ಕಾಣುತ್ತಿದೆ. ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಶುದ್ಧ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ತೇಲ್ಕೂರ ಆಗ್ರಹಿಸಿದ್ದಾರೆ.

ಟ್ಯಾಂಕ್ ಸ್ವಚ್ಛಗೊಳಿಸಲ್ಲ: ಗ್ರಾಮಸ್ಥರ ಆರೋಪ

ಗ್ರಾಮಕ್ಕೆ ನೀರು ಪೂರೈಸುವ ನೀರಿನ ಟ್ಯಾಂಕ್ಗೆ ಕಾಗಿಣಾ ನದಿ ನೀರನ್ನು ತುಂಬಲಾಗುತ್ತದೆ. ನಂತರ ಆ ನೀರನ್ನು ಗ್ರಾಮದ ನಳಗಳಿಗೆ ಪೂರೈಸಲಾಗುತ್ತದೆ. ಕುಡಿಯುವ ನೀರಿನ ಟ್ಯಾಂಕ್ ಅನ್ನು ಆಗಾಗ ಸ್ವಚ್ಛಗೊಳಿಸಬೇಕು. ಅಲ್ಲದೆ ಟ್ಯಾಂಕ್ಗೆ ಮುಚ್ಚಳಿಕೆಯೇ ಇಲ್ಲ. ಆಗಾಗ ಬ್ಲೀಚಿಂಗ್ ಪೌಡರ್ ಹಾಕಿ ಸ್ವಚ್ಛತೆ ಕಡೆಗೆ ಗಮನ ಹರಿಸುವಂತೆ ಜಾಗೃತಿ ಮೂಡಿಸಬೇಕಾದ ಅಧಿಕಾರಿಗಳು ಯಾವುದನ್ನೂ ಮಾಡುತ್ತಿಲ್ಲ. ಟ್ಯಾಂಕ್ ಸ್ವಚ್ಛಗೊಳಿಸದಿರುವುದಕ್ಕೆ ವಾಂತಿ-ಭೇದಿ ಕಾಣಿಸಿಕೊಳ್ಳಲು ಕಾರಣ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.