ಕಲಬುರಗಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಕಲಬುರಗಿ ಪ್ರಾದೇಶಿಕ ಕೇಂದ್ರದಲ್ಲಿ ಶುಕ್ರವಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 70 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ವಿತರಿಸಲಾಯಿತು.

ವಿಟಿಯು ಪ್ರಾದೇಶಿಕ ಕೇಂದ್ರದ ಸ್ನಾತ್ತಕೋತ್ತರ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ಬಿ.ಟೆಕ್, ಎಂ.ಟೆಕ್, ಎಂಬಿಎ, ಎಂಸಿಎ ಕೋರ್ಸ್ಗಳ ಪ್ರತಿಭಾನ್ವಿತ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಲ್ಯಾಪ್ಟಾಪ್ ನೀಡಲಾಯಿತು.

ವಿಟಿಯು ಕಲಬುರಗಿ ಪ್ರಾದೇಶಿಕ ಕೇಂದ್ರ ನಿರ್ದೇಶಕ ಪ್ರೊ. ಬಿ.ಶಂಭುಲಿಂಗಪ್ಪ ಮಾತನಾಡಿ, ‘ವಿದ್ಯಾರ್ಥಿಗಳ ಅಕಾಡೆಮಿಕ್ ಮತ್ತು ತಾಂತ್ರಿಕ ನಿಪುಣತೆ ಅಭಿವೃದ್ಧಿಗೆ ನೆರವಾಗುವ ಉದ್ದೇಶದಿಂದ ಲ್ಯಾಪ್ಟಾಪ್ ವಿತರಿಸಲಾಗಿದೆ. ನಿಮ್ಮ ಅಧ್ಯಯನ ಹಾಗೂ ತಾಂತ್ರಿಕ ಕೌಶಲ ವೃದ್ಧಿಗೆ ಲ್ಯಾಪ್ಟಾಪ್ಗಳನ್ನು ಸದುಪಯೋಗಪಡಿಸಿಕೊಳ್ಳಿ’ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಸಂಯೋಜಕ ಪ್ರೊ.ಎಂ.ಎ.ವಹೀದ್, ಪ್ರೊ.ಸತೀಶ ಉಪಳಾಂವಕರ್, ಪ್ರೊ.ಬ್ರಿಜ್ಭೂಷಣ್ ಎಸ್, ಪ್ರೊ.ರಾಹುಲ್ ಮೂಲಭಾರತಿ, ಪ್ರೊ.ವೀರೇಶ ಪೂಜಾರಿ ಸೇರಿದಂತೆ ಹಲವರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.