ವಾಡಿ: ಸ್ಥಳೀಯ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಈಚೆಗೆ ಮೃತಪಟ್ಟ ಕಾರ್ಮಿಕ ಸಿದ್ದಣ್ಣ ಪಾಟೀಲ ಬಸನಾಳ ಕುಟುಂಬಕ್ಕೆ ಕಾರ್ಖಾನೆ ಆಡಳಿತ ಮಂಡಳಿ ₹ 45 ಲಕ್ಷ ಪರಿಹಾರ ನೀಡಿತು.

ಮೃತ ಕಾರ್ಮಿಕ ಸಿದ್ದಣ್ಣ ಕಳೆದ ಏ.30ರಂದು ಕಾರ್ಖಾನೆ ಎತ್ತರದ ಅಸುರಕ್ಷಿತ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಕಾಲು ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ನರಳಾಡುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಸಾಗಿಸಲಾಗಿತ್ತು. ಕೆಲ ದಿನಗಳ ನಂತರ ಹೈದರಾಬಾದ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.

ಈ ವೇಳೆ ಎಸಿಸಿ ಕಾರ್ಖಾನೆ ಆಡಳಿತ ಮಂಡಳಿ ಒಟ್ಟು ₹26.50 ಲಕ್ಷ ಚಿಕಿತ್ಸೆಗಾಗಿ ಖರ್ಚು ಮಾಡಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಗಾಯಾಳು ಕಾರ್ಮಿಕ ಸಿದ್ದಣ್ಣ ಮೇ 17ರಂದು ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಅನುಕಂಪದ ಆಧಾರದಲ್ಲಿ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು ಎಂದು ವೀರಶೈವ ಸಮಾಜದ ಮುಖಂಡರು ಹಾಗೂ ಕಾರ್ಮಿಕ ಸಂಘಟನೆ ಪದಾಧಿಕಾರಿಗಳು ಒತ್ತಾಯಿಸಿದ್ದರು.

ಚಿಕಿತ್ಸೆಗಾಗಿ ಸಾಕಷ್ಟು ಹಣ ಖರ್ಚು ಮಾಡಿದ್ದು ಉದ್ಯೋಗ ನೀಡಲು ಸಾಧ್ಯವಿಲ್ಲ ಎಂದಾಗ ಸ್ಥಳೀಯರು ಹಾಗೂ ಕಾರ್ಮಿಕ ಸಂಘಟನೆ ಬಿಗಿಪಟ್ಟು ಹಿಡಿದಿದ್ದರಿಂದ ಎಸಿಸಿ ಅದಾನಿ ಸಿಮೆಂಟ್ನ ಪ್ರಮುಖರಾದ ಪ್ರಶಾಂತ ದೇಶಮುಖ ಹಾಗೂ ಕೋಟೇಶ್ವರ ರಾವ ಅವರು ₹45 ಲಕ್ಷ ಘೋಷಿಸಿದ್ದಾರೆ.

ಮೃತ ಕಾರ್ಮಿಕನ ಕುಟುಂಬಸ್ಥರಿಗೆ ಪರಿಹಾರ ಚೆಕ್ನ್ನು ಕಂಪನಿ ಅಧಿಕಾರಿಗಳು ಭಾನುವಾರ ತಡರಾತ್ರಿ ವಿತರಿಸಿದರು.

ಈ ಸಂದರ್ಭದಲ್ಲಿ ಎಐಟಿಯುಸಿ ಕಾರ್ಮಿಕ ಸಂಘದ ಅಧ್ಯಕ್ಷ ಶರಣಬಸು ಸಿರೂರಕರ ಹಾಗೂ ಪ್ರಧಾನ ಕಾರ್ಯದರ್ಶಿ ವಿಶಾಲ ನಂದೂರಕರ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಗೌಡ ಚಾಮನೂರ, ಮುಖಂಡರಾದ ಭೀಮಶಾ ಜಿರೊಳ್ಳಿ, ವೀರಣ್ಣ ಯಾರಿ, ಬಸವರಾಜ ಪಂಚಾಳ, ಶರಣು ನಾಟೇಕರ ಸೇರಿದಂತೆ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-31-354617587

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.