ವಾಡಿ: ‘ಸಮಾಜದಲ್ಲಿ ಅಹಿತಕರ ಘಟನೆಗಳು ಕಂಡು ಬಂದರೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು. ಅದನ್ನು ಹೊರತುಪಡಿಸಿ ಅನೈತಿಕ ಪೊಲೀಸ್ಗಿರಿಗೆ ಮುಂದಾದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ಎಚ್ಚರಿಕೆ ನೀಡಿದರು.

ವಾಡಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ‘ಮೇ 28 ರಂದು ಬಕ್ರೀದ್ ಹಬ್ಬ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸಿದರೂ ಪೊಲೀಸ್ ಇಲಾಖೆ ಅಂಥವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸುತ್ತದೆ. ಅಕ್ರಮ ಸಾಗಾಣಿಕೆ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದು ಹೇಳಿದರು.

ತಹಶೀಲ್ದಾರ್ ನಾಗಯ್ಯ ಹಿರೇಮಠ ಮಾತನಾಡಿ, ‘ಯಾವುದೇ ಘಟನೆ ಜರುಗಿದಾಗ ಅದರ ಸತ್ಯಾಸತ್ಯತೆ ತಿಳಿದು ನಂತರ ಅದನ್ನು ಹಂಚಬೇಕು. ಸುಳ್ಳಿದ್ದರೆ ಕ್ರಮ ಜರುಗಿಸುವ ಕಾನೂನು ಬಂದಿದೆ’ ಎಂದರು.

ಮುಸ್ಲಿಂ ಸಮಾಜದ ಮುಖಂಡ ಸೈಯ್ಯದ್ ಬಾಬುಮಿಯ್ಯ, ಸಿಪಿಐ ಸಿದ್ದಬಸವನಗೌಡ, ಪಿಎಸ್ಐ ತಿರುಮಲೇಶ ಕುಂಬಾರ, ಪಶು ಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಶಂಕರ ಕಣ್ಣಿ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಸೂರ್ಯಕಾಂತ ರದ್ದೇವಾಡಿ, ಶರಣಬಸ್ಸು ಶಿರೂರುಕರ ಮಾತನಾಡಿದರು.

ಈ ಸಂದರ್ಭದಲ್ಲಿ ಅಪರಾಧ ವಿಭಾಗದ ಪಿಎಸ್ಐ ರೇಣುಕಾ ಉಡಗಿ, ಬಷೀರ್ ಖುರೇಶಿ, ಶರಣು ನಾಟೆಕಾರ, ಮಹ್ಮದ್ ಗೌಸ್, ಸೂರ್ಯಕಾಂತ ರದ್ದೇವಾಡಿ, ಹರಿ ಗಲಾಂಡೆ, ರವಿ ಕಾರಬಾರಿ, ಶ್ರಾವಣಕುಮಾರ ಮೊಸಲಗಿ, ಮಲ್ಲಯ್ಯ ಗುತ್ತೇದಾರ, ನಾಗೇಂದ್ರ ಜೈಗಂಗಾ, ಸಿದ್ದು ಪೂಜಾರಿ, ಕಿಶಾನ ಜಾಧವಸೇರಿದಂತೆ ಇನ್ನಿತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-31-316974199

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.