ವಾಡಿ (ಕಲಬುರಗಿ ಜಿಲ್ಲೆ): ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ 2.45ರ ಹೊತ್ತಿಗೆ ವ್ಯಕ್ತಿಯೊಬ್ಬರ ಮೇಲೆ ಗುಂಡಿನ ದಾಳಿಗೈದು, ಲಾಂಗು–ಮಚ್ಚುಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.

ಸ್ಥಳೀಯ ಭಾಯ್ ಭಾಯ್ ಗ್ರೂಪ್ ತಂಡದ ಅಧ್ಯಕ್ಷ ಮಹ್ಮದ್ ಇರ್ಫಾನ್ ಭೀಕರವಾಗಿ ಕೊಲೆಯಾದವರು. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ.

ಮಹ್ಮದ್ ಇರ್ಫಾನ್ ಅವರು ಬಲರಾಮ ಚೌಕ್ನಿಂದ ವಾಡಿ ಪಟ್ಟಣಕ್ಕೆ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ನಾಲ್ಕೈದು ಜನರ ತಂಡ ಮೊದಲು ಸ್ಕೂಟರ್ಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿದ್ದಾರೆ. ನಂತರ ಗುಂಡು ಹಾರಿಸಿದ್ದಾರೆ. ತಪ್ಪಿಸಿಕೊಂಡು ಓಡುತ್ತಿದ್ದ ವೇಳೆ ಬೆನ್ನತ್ತಿ ಲಾಂಗು–ಮಚ್ಚಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಕೊಲೆ ಮಾಡಿ ಕಾರಿನಲ್ಲಿ ಪರಾರಿಯಾಗುವ ವೇಳೆ ಕಾರು ಗುಂಡಿಗೆ ಬಿದ್ದಿದ್ದು, ಆರೋಪಿಗಳು ಬೇರೆ ಕಾರಿನಲ್ಲಿ ಪರಾರಿಯಾಗಿದ್ದಾರೆ.

ಸಾರ್ವಜನಿಕರ ಎದುರೇ ಹಾಡಹಗಲೇ ನಡೆದ ಈ ದುಷ್ಕೃತ್ಯ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ.

ಘಟನಾ ಸ್ಥಳಕ್ಕೆ ಈಶಾನ್ಯ ವಲಯ ಡಿಐಜಿ ಶಾಂತನು ಸಿನ್ಹಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣವರ, ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ಸಿಪಿಐ ಸಿದ್ದಬಸವನಗೌಡ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

ಮೃತದೇಹವನ್ನು ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ವಾಡಿ ಪಟ್ಟಣ ಈಗ ಬೂದಿ ಮುಚ್ಚಿದ ಕೆಂಡದಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.