19ರಂದು ಸಭೆ: ಸೆಪ್ಟೆಂಬರ್ 19 ರಂದು ಗುರುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಅದಾಲತ್‌ಗೆ ಸಂಬಂಧಪಟ್ಟಂತೆ ಎಲ್ಲ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ತಹಶೀಲ್ದಾರರು, ಕಾರ್ಯನಿರ್ವಹಣಾಧಿಕಾರಿ, ನಗರಸಭೆ/ ಆಯುಕ್ತರು ಹಾಗೂ ಡಿಡಿಎಲ್‍ಆರ್/ಎಡಿಎಲ್‍ಆರ್‌ಗಳೊಂದಿಗೆ ಜಮೀರ್ ಅಹ್ಮದ್ ಖಾನ್ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.