ಅಫಜಲಪುರ: ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸದ್ಯಕ್ಕೆ ತಾಲ್ಲೂಕಿನಲ್ಲಿ 20 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.

‘ಈಗಾಗಲೇ 15 ದಿನಗಳ ಹಿಂದೆ ಜಿಲ್ಲಾಧಿಕಾರಿ ನೀರಿನ ಸಮಸ್ಯೆ ಇರುವ ತಾಲ್ಲೂಕಿನ ಗ್ರಾಮಗಳಿಗೆ ಭೇಟಿ ನೀಡಿ, ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸಮಸ್ಯೆ ನಿರ್ವಹಣೆಗೆ ಸೂಚನೆ ನೀಡಿ ಹೋಗಿದ್ದಾರೆ. ಆದರೂ ದಿನಕ್ಕೊಂದು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುತ್ತಿದೆ. ತಾಲ್ಲೂಕು ಆಡಳಿತ 8 ಗ್ರಾಮಗಳಲ್ಲಿ ಖಾಸಗಿಯವರಿಂದ ಕೊಳವೆ ಬಾವಿಗಳನ್ನು ಖರೀದಿ ಮಾಡಿ, ಕುಡಿಯುವ ನೀರು ಪೂರೈಕೆ ಮಾಡುತ್ತಿದೆ’ ಎಂದು ತಿಳಿದುಬಂದಿದೆ.

ತಹಶೀಲ್ದಾರ್ ಸಂಜುಕುಮಾರ್ ದಾಸರ್ ಮಾಹಿತಿ ನೀಡಿ, ‘ಸದ್ಯಕ್ಕೆ 8 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ. ಹೀಗಾಗಿ ನಾವು ಖಾಸಗಿಯವರ ಕೊಳಬಾವಿಗಳನ್ನು ಖರೀದಿ ಮಾಡಿದ್ದೇವೆ. ಹೀಗಾಗಿ ತಾತ್ಕಾಲಿಕವಾಗಿ ಕುಡಿಯುವ ನೀರಿನ ಸಮಸ್ಯೆ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ತಾಲ್ಲೂಕಿನ ಬಂಕಲಗಿ, ಅಂಕಲಗ ನಂದರ್ಗಿ, ಉಡಚಣ, ಜೇವರ್ಗಿ, ನಂದರ್ಗಿ, ಚಿಂಚೋಳಿ, ರೇವೂರು ಗ್ರಾಮಗಳು ಸೇರಿವೆ. ಇನ್ನೂ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಹಂತ ಹಂತವಾಗಿ ಸಮಸ್ಯೆ ಬಗೆಹರಿಸುವ ಕೆಲಸ ನಡೆದಿದೆ’ ಎಂದು ತಿಳಿಸಿದರು.

ಪುರಸಭೆಯ ಮುಖ್ಯ ಅಧಿಕಾರಿ ವಿಜಯ ಮಹಾಂತೇಶ್ ಹೂಗಾರ್, ‘ಪಟ್ಟಣಕ್ಕೆ ನೀರು ಪೂರೈಕೆ ಆಗುವ ಭೀಮಾ ನದಿಯ ಜಾಕ್ವೆಲ್ ಹತ್ತಿರ ನೀರು ಸಂಗ್ರಹವಿದೆ. ಪಟ್ಟಣಕ್ಕೆ ದಿನ ಬಿಟ್ಟು ದಿನ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದೇವೆ. ಅದರಂತೆ ಪಟ್ಟಣದ ಕೆಲವು ವಾರ್ಡ್ಗಳಲ್ಲಿ ಕೊಳವೆಬಾವಿ ಕೊರೆಯಲಾಗುತ್ತದೆ’ ಎಂದು ಅವರು ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಗಿರೀಶ್ ಮಾಹಿತಿ ನೀಡಿ, ‘ಸದ್ಯಕ್ಕೆ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪಟ್ಟಿ ಮಾಡಿ ಹಂತ ಹಂತವಾಗಿ ಕುಡಿಯುವ ನೀರು ಪೂರೈಕೆ ಮಾಡುವ ಕೆಲಸ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.

‘ತಾಲ್ಲೂಕಿನ ನಂದರಗಿ ಗ್ರಾಮದಲ್ಲಿ ಸರ್ಕಾರ ವಿವಿಧ ಯೋಜನೆ ಅಡಿಯಲ್ಲಿ ಕೊರದಿರುವ ಕೊಳವೆಬಾವಿಗಳು ಸಂಪೂರ್ಣವಾಗಿ ಬತ್ತಿ ಹೋಗಿದ್ದು, ದಿನಾಲು ಮಹಿಳೆಯರು, ಮಕ್ಕಳು ತೋಟಗಳಿಂದ ಕುಡಿಯುವ ನೀರು ತರುತ್ತಿರುವುದು ಸಾಮಾನ್ಯವಾಗಿದೆ’ ಎಂದು ಗ್ರಾಮದ ಮುಖಂಡರಾದ ಜಾಗೀರ್ದಾರ್ ತಿಳಿಸಿದರು.

ಗೊಬ್ಬೂರು (ಬಿ) ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರು ಕೊಳೆಬಾವಿಗಳ ಮುಂದೆ ದಿನಗಟ್ಟಲೆ ಕಾಯಬೇಕಾಗಿದೆ. ಗ್ರಾಮದಲ್ಲಿ ಸುಮಾರು 10 ಸಾವಿರ ಜನಸಂಖ್ಯೆ ಇದ್ದು, ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಜನರು ನಿತ್ಯ ಪರದಾಡುವಂತೆ ಆಗಿದೆ.

‘ತಾಲ್ಲೂಕಿನ ಮಾಶಾಳ ಗ್ರಾಮದಲ್ಲಿ ನೀರಿನ ಮೂಲ ಕಡಿಮೆಯಾಗಿ 6 ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತವಾಗಿವೆ. ಇನ್ನೊಂದೆಡೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ನಿರ್ವಹಣೆ ಇಲ್ಲದೆ ನೀರು ಬರುತ್ತಿಲ್ಲ. ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯವರು ವಾರಕ್ಕೊಮ್ಮೆ ಕುಡಿಯುವ ನೀರು ಬಿಡುತ್ತಿದ್ದಾರೆ’ ಎಂದು ಮುಖಂಡರಾದ ಸಂತೋಷ್ ಗಂಜಿ ಹೇಳುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.