ಸೋಮವಾರ, ಅಕ್ಟೋಬರ್ 26, 2020
28 °C

ಸೊನ್ನದಿಂದ‌ 5.85 ಲಕ್ಷ ಕ್ಯುಸೆಕ್ ನೀರು ಬಿಡುಗಡೆ: 148 ಗ್ರಾಮಗಳಿಗೆ ಪ್ರವಾಹ ಭೀತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಶುಕ್ರವಾರ ‌ಬೆಳಿಗ್ಗೆ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜಿನಿಂದ 5.85 ಲಕ್ಷ ಕ್ಯುಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗಿದೆ.

ಇದರಿಂದಾಗಿ ಜಿಲ್ಲೆಯ 148 ಗ್ರಾಮಗಳಲ್ಲಿ ಮುಳುಗಡೆ ಭೀತಿ ಎದುರಾಗಿದೆ. ಸಂಜೆ ವೇಳೆಗೆ 7.50 ಲಕ್ಷ ‌ಕ್ಯುಸೆಕ್ ನೀರು ಹೊರಬಿಡುವ ಸಾಧ್ಯತೆ ಇದೆ.

ಪ್ರವಾಹದಲ್ಲಿ ‌ಸಿಲುಕಿಕೊಂಡವರ ರಕ್ಷಣೆಗಾಗಿ ಎರಡು ಹೆಲಿಕಾಪ್ಟರ್ ಗಳು ಬೀದರ್ ವಾಯುನೆಲೆಗೆ ಬಂದಿಳಿಯಲಿವೆ. ಹೆಚ್ಚುವರಿ ಎಸ್ ಡಿ ಆರ್ಎಫ್ ತಂಡಗಳನ್ನು ಕರೆಸಿಕೊಳ್ಳಲಾಗುತ್ತಿದ್ದು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಂದ ಬೋಟ್ ಹಾಗೂ ನುರಿತ ಈಜುಗಾರರನ್ನು ಕರೆಸಿಕೊಳ್ಳಲಾಗುತ್ತಿದೆ.

ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ‌ಇಡೀ ರಾತ್ರಿ ಅಧಿಕಾರಿಗಳ ‌ಸಭೆ ನಡೆಸಿದ್ದು, ಎಲ್ಲ 148 ಗ್ರಾಮಗಳ ಸ್ಥಳಾಂತರ ಪ್ರಕ್ರಿಯೆ ಆರಂಭವಾಗಿದೆ.


ಕಲಬುರ್ಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ಅರಣಕಲ್ ಗ್ರಾಮದ ಕೆರೆ ಭಾರಿ ಮಳೆಗೆ ಒಡೆದು ಹೋಗಿದೆ

 


ಕಲಬುರ್ಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ಅರಣಕಲ್ ಗ್ರಾಮದ ಕೆರೆ ಭಾರಿ ಮಳೆಗೆ ಒಡೆದು ಹೋಗಿದೆ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು