ಶನಿವಾರ, ಜನವರಿ 18, 2020
21 °C
ಮಾಶಾಳ ಗ್ರಾಮಸ್ಥರಿಂದ ಗ್ರಾ.ಪಂ ಕಚೇರಿಗೆ ಮುತ್ತಿಗೆ

‘ಕುಡಿಯುವ ನೀರಿನ ಸಮಸ್ಯೆ ನಿವಾರಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಫಜಲಪುರ: ತಾಲ್ಲೂಕಿನ ಮಾಶಾಳ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆಯಿಂದ ಬೇಸತ್ತು ಗುರುವಾರ ಗ್ರಾಮ ಪಂಚಾಯಿತಿ ಕಚೇರಿ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿಯು ಕಚೇರಿ ಮೂರು ಬಾರಿ ಗಾಂಧಿ ಪುರಸ್ಕಾರ ಪಡೆದರೂ ಹಲವು ತಿಂಗಳಿಂದ ಗ್ರಾಮದಲ್ಲಿ ದಿನನಿತ್ಯ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಸಮಾಜ ಸೇವಕ ಜೆ.ಎಂ ಕೊರಬು ಮಾತನಾಡಿ, ‘ಗ್ರಾಮೀಣ ಪ್ರದೇಶದ ಬಡ ಜನರಿಗೆ ಶುದ್ಧ ಕುಡಿಯುವ ನೀರಿಗಾಗಿ ಸರ್ಕಾರ ಕೋಟಿಗಟ್ಟಲೆ ಹಣ ಖರ್ಚು ಮಾಡುತ್ತಿದೆ. ಆದರೆ ಸ್ಥಳಿಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂದಿಗೂ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಇದೆ’ ಎಂದರು.

ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರ ಬಗೆಹರಿಸಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಶಂಕರಲಿಂಗ ಮೋಸಲಗಿ, ಮರೆಪ್ಪ ಮುಗಳಿ, ಸಂತೋಷ ಗಂಜಿ, ಸಿದ್ದು ಪುಜಾರಿ, ಶಿವಾನಂದ ದಯಗೋಡಿ, ಸಿದ್ದು ಆಲೇಗಾಂವ, ಮಹೇಶ ಪರಹಂಡಿ, ಖಾಜಪ್ಪ ಪೂಜಾರಿ, ಬಸು ಪುಜಾರಿ, ಸುರೇಶ ರಾಕಾ, ರೇಣುಕಾ ಇಟಗಾರ, ಲಾಯವ್ವ ಪುಜಾರಿ, ನಿಂಗಮ್ಮ ಬಿಂಗೋಳಿ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು