ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರು ಸರಬರಾಜು: ಮಾಹಿತಿ ಸಂಗ್ರಹ

Last Updated 22 ಸೆಪ್ಟೆಂಬರ್ 2020, 13:31 IST
ಅಕ್ಷರ ಗಾತ್ರ

ಕಲಬುರ್ಗಿ: ಮಹಾನಗರ ಪಾಲಿಕೆ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ಹಾಗೂ ಎಲ್ ಎಂಡ್ ಟಿ ಕನ್‌ಸ್ಟ್ರಕ್ಷನ್‌ ಕಂಪನಿ ಇವುಗಳ ಸಹಯೋಗದೊಂದಿಗೆ ನಗರದಲ್ಲಿ 24X7 ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಎಂಜಿನಿಯರ್‌ ತಿಳಿಸಿದ್ದಾರೆ.

ಈ ಯೋಜನೆಯ ಅತ್ಯಂತ ಪ್ರಮುಖ ಅಂಶವಾದ ಗ್ರಾಹಕರ ಮಾಹಿತಿ ಸಂಗ್ರಹ ಕಾರ್ಯ ಈಗ ಪ್ರಾರಂಭಿಸಲಾಗುತ್ತಿದೆ. ಕ್ಷೇತ್ರ ಕಾರ್ಯಕರ್ತರು ಗ್ರಾಹಕರ ಸಮೀಕ್ಷೆಗಾಗಿ ನಗರದಲ್ಲಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಗ್ರಾಹಕರು ನೀಡಿದ ಮಾಹಿತಿಯು 24X7 ನೀರು ಸರಬರಾಜು ಯೋಜನೆಯ ಯಶಸ್ಸು ಅವಲಂಭಿಸಿದೆ.ಪಾಲಿಕೆಯಿಂದ ಮಾಹಿತಿ ಸಂಗ್ರಹಿಸುವ ಕ್ಷೇತ್ರ ಕಾರ್ಯಕರ್ತರಿಗೆ ಗುರುತಿನ ಚೀಟಿ ಸಹ ನೀಡಲಾಗಿದೆ. ಕ್ಷೇತ್ರ ಕಾರ್ಯಕರ್ತರಿಗೆ ತಮ್ಮ ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಸರಿಯಾದ ಮಾಹಿತಿ ನೀಡಿ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.

ವಂತಿಗೆ ಹಣ ಪಾವತಿಗೆ ಸೂಚನೆ

ಕಲಬುರ್ಗಿ: ಕೆಸರಟಗಿ ಆಶ್ರಯ ಕಾಲೊನಿಯ (ಸರ್ವೆ ನಂ. 27 ಮತ್ತು 28)ರಲ್ಲಿನ ವಾಜಪೇಯಿ ನಗರ ವಸತಿ ಯೋಜನೆಯಡಿ ಈ ಹಿಂದೆ ಆಯ್ಕೆಯಾದ ಫಲಾನುಭವಿಗಳು ತಮ್ಮ ಪಾಲಿನ ಬಾಕಿ ಉಳಿದ ವಂತಿಕೆ ಹಣ (ಡಿ.ಡಿ.)ವನ್ನು 15 ದಿನದೊಳಗಾಗಿ ಪಾಲಿಕೆಗೆ ಭರಿಸಬೇಕೆಂದು ಆಯುಕ್ತರು ತಿಳಿಸಿದ್ದಾರೆ.

ಫಲಾನುಭವಿಗಳು ತಮ್ಮ ಪಾಲಿನ ಪೂರ್ಣ ವಂತಿಕೆ ಹಣ ಪಾಲಿಕೆಗೆ ಭರಿಸಿದ ನಂತರವೇ ಮನೆಗಳ ಸ್ವಾಧೀನತೆ ಪತ್ರ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಪೋಷಣ ಮಾಸ ಶಿಬಿರ ಯಶಸ್ವಿ

ಕಲಬುರ್ಗಿ: ಜಿಲ್ಲಾ ಪಂಚಾಯಿತಿ, ಸರ್ಕಾರಿ ಹೋಮಿಯೋಪತಿ ಚಿಕಿತ್ಸಾಲಯ ಮಕ್ತಂಪೂರ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಇವರ ಆಶ್ರಯದಲ್ಲಿ ರಾಷ್ಟೀಯ ಪೋಷಣ ಅಭಿಯಾನ ಮಾಸಾಚರಣೆ ಅಡಿಯಲ್ಲಿ ಮಂಗಳವಾರ ನಗರದ ಪುಟಾಣಿ ಗಲ್ಲಿಯಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಪೋಷಣ ಮಾಸ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಮಕ್ತಂಪೂರ ಹೋಮಿಯೋಪತಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಿಯಾಜ್‌ ಹು. ಸುಳ್ಳದ ಮಾತನಾಡಿ, ಮಕ್ಕಳು, ಗರ್ಭಿಣಿಯರು ಹಾಗೂ ಸ್ತನ್ಯಪಾನ ಮಾಡಿಸುವ ತಾಯಂದಿರು ಪೌಷ್ಟಿಕತೆಯನ್ನು ಹೆಚ್ಚಿಸಿಕೊಳ್ಳಲು ಪ್ರತಿದಿನ ಮನೆಯಲ್ಲಿ ಸಿಗುವ ಪದಾರ್ಥಗಳನ್ನು ಹೇಗೆ ಬಳಸಬೇಕು ಎಂದು ಮಾಹಿತಿ ನೀಡಿದರು.

ಮಕ್ತಂಪೂರ ಮೇಲ್ವಿಚಾರಕಿ ಶೋಭಾ ಪಾಟೀಲ, ಕಿರಿಯ ಆರೋಗ್ಯ ಸಹಾಯಕಿ ಕಲಾವತಿ, ಆಶಾ ಕಾರ್ಯಕರ್ತೆ ನಸರಿನ್, ಗರ್ಭಿಣಿಯರು, ಅಂಗನವಾಡಿ ಕಾರ್ಯಕರ್ತೆ ಸುಲೋಚನಾ, ಅನುಸೂಯಾ, ಶರ್ಪುನೀಸಾ, ರಫೀಯಾ, ತನವೀರ, ಕವಿತಾ, ಶ್ರೀದೇವಿ, ಮಹೆಜಬೀನ್ ಇದ್ದರು.

ಪ್ರಸ್ತಾವ ಆಹ್ವಾನ

ಕಲಬುರ್ಗಿ: ಜಿಲ್ಲಾ ಖಜಾನೆ ಉಪನಿರ್ದೇಶಕರ ಕಚೇರಿಯಲ್ಲಿ ಖಾಲಿ ಇರುವ ಒಂದು ಗ್ರೂಪ್-ಡಿ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಪೂರೈಕೆಗಾಗಿ ಆಸಕ್ತ ಸಂಸ್ಥೆಗಳಿಂದ ಪ್ರಸ್ತಾವ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಖಜಾನೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಅರ್ಹ ಸಂಸ್ಥೆಗಳು ಉಪನಿರ್ದೇಶಕರು, ಜಿಲ್ಲಾ ಖಜಾನೆ ಕಲಬುರಗಿ ಇವರ ಹೆಸರಿನಲ್ಲಿ ಪ್ರಸ್ತಾವವನ್ನು ಮಿನಿ ವಿಧಾನಸೌಧದ ಕೊಠಡಿ ಸಂಖ್ಯೆ– 6ರಲ್ಲಿನ ಜಿಲ್ಲಾ ಖಜಾನೆಯ ಉಪನಿರ್ದೇಶಕರ ಕಚೇರಿಯಲ್ಲಿ 2020ರ ಸೆ. 25ರ ಸಂಜೆ 4.30 ಗಂಟೆಯೊಳಗಾಗಿ ಸಲ್ಲಿಸಬೇಕು. ಕೆಟಿಪಿಪಿ ಕಾಯ್ದೆ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಷರತ್ತು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಖಜಾನೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT