ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾತ್ರಿ–ವಾರಾಂತ್ಯ ಕರ್ಫ್ಯೂ ಮುಂದುವರಿಕೆ

Last Updated 22 ಜೂನ್ 2021, 6:02 IST
ಅಕ್ಷರ ಗಾತ್ರ

ಕಲಬುರ್ಗಿ: ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಜಿಲ್ಲೆಯಾದ್ಯಂತ ಹೇರಿದ್ದ ಲಾಕ್‌ಡೌನ್‌ನಲ್ಲಿ ಭಾಗಶಃ ವಿನಾಯಿತಿ ನೀಡಿದ ಜಿಲ್ಲಾಡಳಿತ, ಪ್ರತಿ ದಿನ ರಾತ್ರಿ ಹಾಗೂ ವಾರಾಂತ್ಯ ಕರ್ಫ್ಯೂ ಮುಂದುವರಿಸಿದೆ. ಜೂನ್‌ 21ರಿಂದಲೇ ಬೆಳಿಗ್ಗೆ 6 ಗಂಟೆಯಿಂದ ಜುಲೈ 5ರ ಬೆಳಿಗ್ಗೆ 5 ಗಂಟೆಯವರೆಗೆ ಹೊಸ ಆದೇಶ ಅನ್ವಯವಾಗಲಿದೆ.

ಎಲ್ಲ ಉತ್ಪಾದನಾ ಘಟಕಗಳು, ಕೈಗಾರಿಕೆಗಳಲ್ಲಿ ಶೇ 50ರಷ್ಟು ಸಿಬ್ಬಂದಿಯೊಂದಿಗೆ ಹಾಗೂ ಗಾರ್ಮೆಂಟ್ ತಯಾರಿಕೆಯಲ್ಲಿ ತೊಡಗಿರುವ ಘಟಕಗಳು, ಸಂಸ್ಥೆಗಳು, ಕೈಗಾರಿಕೆಗಳು ಶೇ 30ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಪ್ರತಿದಿನ ಬೆಳಿಗ್ಗೆ 6ರಿಂದ ಸಂಜೆ 5 ರವರೆಗೆ ಕಂಟೇನ್ಮೆಂಟ್‌ ವಲಯ ದೇಶದ ಹೊರಗಡೆ ಇರುವ ಎಲ್ಲ ಅಂಗಡಿಗಳು, ಸರಕುಗಳು, ಸೇವೆಗಳಿಗೆ ಅನುಮತಿ ನೀಡಲಾಗಿದೆ. ಆದರೆ, ಹವಾನಿಯಂತ್ರಿತ ಅಂಗಡಿಗಳು, ಹವಾನಿಯಂತ್ರಿತ ಶಾಪಿಂಗ್ ಸಂಕೀರ್ಣಗಳು ಹಾಗೂ ಮಾಲ್‍ಗಳು ತೆರೆಯಲು ಅನುಮತಿ ಇಲ್ಲ. ವ್ಯಕ್ತಿಗಳ ಚಲನೆಯನ್ನು ಕಡಿಮೆ ಮಾಡಲು ಎಲ್ಲಾ ವಸ್ತುಗಳನ್ನು 24X7 ಹೋಮ್ ಡೆಲಿವರಿಗೆ ಪ್ರೋತ್ಸಾಹಿಸಲಾಗುತ್ತದೆ. ಎಲ್ಲ ಹೋಟೆಲ್‌, ರೆಸ್ಟೊರೆಂಟ್‍ಗಳು, ಉಪಾಹಾರ ಗೃಹಗಳು, ಬಾರ್‌ ಮತ್ತು ಕ್ಲಬ್‍ಗಳಲ್ಲಿ ಮದ್ಯ ಪೂರೈಕೆ ಹೊರತುಪಡಿಸಿ ಶೇ 50ರಷ್ಟು ಸಾಮರ್ಥ್ಯದೊಂದಿಗೆ ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶ ಇದೆ. ಹವಾನಿಯಂತ್ರಣ ಹೊಂದಿರುವ ಹೋಟೆಲ್‍ಗಳು, ರೆಸ್ಟೊರೆಂಟ್‍ಗಳು, ಬಾರ್‌ ಕಾರ್ಯನಿರ್ವಹಿಸಲು ಅನುಮತಿ ಇಲ್ಲ. ವಸತಿ– ರೆಸಾರ್ಟ್‍ಗಳಲ್ಲಿ ಶೇ 50ರಷ್ಟು ಮಂದಿಗೆ ಮಾತ್ರ ಪ್ರವೇಶ ನೀಡಬೇಕು.

ಕರ್ಫ್ಯೂ ಮಾರ್ಗಸೂಚಿ: ಜೂನ್ 21ರಿಂದ ಜುಲೈ 5ರವರೆಗೆ ಪ್ರತಿದಿನ ರಾತ್ರಿ 7 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ವ್ಯಕ್ತಿಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ತುರ್ತು ಅಗತ್ಯವಿರುವ ರೋಗಿಗಳು ಮತ್ತು ಅವರ ಪಾಲಕರ ಸಂಚಾರಕ್ಕೆ ಅನುಮತಿಸಲಾಗಿದೆ.

ರಾತ್ರಿಯಲ್ಲಿ ಕಾರ್ಯಾಚರಣೆ ಅಗತ್ಯವಿರುವ ಎಲ್ಲ ಕೈಗಾರಿಕೆಗಳು, ಕಂಪನಿಗಳಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಿದ್ದು, ಅಂತಹ ಸಂಸ್ಥೆಗಳ ನೌಕರರ ಚಲನೆಗೆ ಆಯಾ ಸಂಸ್ಥೆ ನೀಡುವ ಗುರುತಿನ ಚೀಟಿ ಕಡ್ಡಾಯ. ಎಲ್ಲಾ ರೀತಿಯ ಸರಕುಗಳ ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ.

ವಾರಂತ್ಯ ಕರ್ಫ್ಯೂನಲ್ಲಿ ಪ್ರತಿ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಅಗತ್ಯ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಸಾರ್ವಜನಿಕರ ಚಲನವಲನ ಕಡ್ಡಾಯವಾಗಿ ನಿಷೇಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT