ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಳಗಿ: ಒನಕೆಯಿಂದ ಹೊಡೆದು ಪತ್ನಿ ಕೊಲೆ

Published 22 ಡಿಸೆಂಬರ್ 2023, 16:05 IST
Last Updated 22 ಡಿಸೆಂಬರ್ 2023, 16:05 IST
ಅಕ್ಷರ ಗಾತ್ರ

ಕಾಳಗಿ: ತಾಲ್ಲೂಕಿನ ಅಲ್ಲಾಪುರ ಗ್ರಾಮದಲ್ಲಿ ಗುರುವಾರ ತಡರಾತ್ರಿ ವ್ಯಕ್ತಿಯೊಬ್ಬ ಒನಕೆಯಿಂದ ಹೊಡೆದು ಪತ್ನಿಯನ್ನೇ ಕೊಲೆ ಮಾಡಿದ್ದಾನೆ.

ಕಾಶಮ್ಮ ಮಾರುತಿ ಗುತ್ತೇದಾರ (60) ಕೊಲೆಯಾದ ಮಹಿಳೆ. ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸಿದ ಪತಿ ಮಾರುತಿ ತಿಪ್ಪಯ್ಯ ಗುತ್ತೇದಾರ (62), ರಾತ್ರಿ ಮಲಗಿದ್ದ ವೇಳೆ ಒನಕೆಯಿಂದ ತಲೆಗೆ ಹೊಡೆದಿದ್ದಾನೆ. ಕಾಶಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪುತ್ರ ಸಾಬಯ್ಯ ಮಾರುತಿ ಗುತ್ತೇದಾರ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ರಟಕಲ್‌ ಪೊಲೀಸರು ಶುಕ್ರವಾರ ಆರೋಪಿಯನ್ನು ಬಂಧಿಸಿದ್ದಾರೆ.

ಸುಲೇಪೇಟ ಸಿಪಿಐ ರಾಘವೇಂದ್ರ, ರಟಕಲ್‌ ಪಿಎಸ್ಐ ಪುಷ್ಪಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾಳಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶವ ಪರೀಕ್ಷೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT