ಶುಕ್ರವಾರ, ಮಾರ್ಚ್ 31, 2023
26 °C

ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಧಾನಿಯೊಂದಿಗೆ ಚರ್ಚೆ: ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಲು ದೆಹಲಿಗೆ ತೆರಳುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು‌.

ವಿಶೇಷ ವಿಮಾನದ ‌ಮೂಲಕ ದೆಹಲಿಗೆ ತೆರಳುವುದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ನಡೆಯುವ ನಿರೀಕ್ಷೆಯನ್ನು ‌ನಾನೂ ಇಟ್ಟುಕೊಂಡಿದ್ದೇನೆ ಎಂದರು.

ಕಲ್ಯಾಣ ‌ಕರ್ನಾಟಕ ಅಭಿವೃದ್ಧಿ ‌ಮಂಡಳಿಗೆ ಅಗತ್ಯ ಅನುದಾನ ನೀಡುವ ಆಸೆ ಇದೆ. ಆದರೆ ಕೋವಿಡ್ ಇರುವುದರಿಂದ ಹೆಚ್ಚು ಅನುದಾನ ನೀಡಲು ‌ಸದ್ಯಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು