ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಮಹಿಳಾ ಕಾನ್‌ಸ್ಟೆಬಲ್ ಸಿಡಿಆರ್ ಸೋರಿಕೆ: ತನಿಖೆ

Published 22 ಡಿಸೆಂಬರ್ 2023, 15:53 IST
Last Updated 22 ಡಿಸೆಂಬರ್ 2023, 15:53 IST
ಅಕ್ಷರ ಗಾತ್ರ

ಕಲಬುರಗಿ: ಕಮಿಷನರೇಟ್ ವ್ಯಾಪ್ತಿಯ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರ ಫೋನ್ ಕರೆ ವಿವರಗಳ‌ ವರದಿಯನ್ನು (ಸಿಡಿಆರ್) ಸಹದ್ಯೋಗಿ ಪೊಲೀಸರು ಆಕೆಗೆ ಕಿರುಕುಳ ನೀಡುತ್ತಿದ್ದ ದುಷ್ಕರ್ಮಿಗೆ ಸೋರಿಕೆ ಮಾಡಿದ ಆರೋಪ ಕೇಳಿ ಬಂದಿದೆ.

ಸಿಡಿಆರ್ ಪಡೆದುಕೊಂಡು ಮಾನಸಿಕ ಕಿರುಕುಳ ನೀಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಂತ್ರಸ್ತ ಮಹಿಳಾ ಕಾನ್‌ಸ್ಟೆಬಲ್, ಪೊಲೀಸ್ ‌ಕಮಿಷನರ್ ಚೇತನ್ ಆರ್. ಅವರಿಗೆ ದೂರು ನೀಡಿದ್ದಾರೆ.

ಸಿಡಿಆರ್ ಸೋರಿಕೆ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಕಮಿಷನರ್ ಅವರು ಡಿಸಿಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

‘ಮಹಿಳಾ ಕಾನ್‌ಸ್ಟೆಬಲ್ ಒಬ್ಬರ ಸಿಡಿಆರ್ ಸೋರಿಕೆ ಮಾಡಿದ ಸಂಬಂಧ ದೂರು ಬಂದಿದೆ. ಪ್ರಸ್ತುತ ತನಿಖೆ ನಡೆಯುತ್ತಿದೆ. ತನಿಖೆ ಮುಗಿದ ಬಳಿಕ ಹೆಚ್ಚಿನ ಮಾಹಿತಿ ತಿಳಿದು ಬರಲಿದೆ’ ಎಂದು ಪೊಲೀಸ್ ಕಮಿಷನರ್ ಚೇತನ್ ಆರ್. ಅವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT