ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೇವರ್ಗಿ: ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು

Published 11 ಜೂನ್ 2024, 14:28 IST
Last Updated 11 ಜೂನ್ 2024, 14:28 IST
ಅಕ್ಷರ ಗಾತ್ರ

ಜೇವರ್ಗಿ: ತಾಲ್ಲೂಕಿನ ಬಳ್ಳುಂಡಗಿ ಗ್ರಾಮದ ಹೊಲಕ್ಕೆ ಸೋಮವಾರ ಕೂಲಿ ಕೆಲಸಕ್ಕೆ ತೆರಳಿದ್ದ ಮಹಿಳೆಯೊಬ್ಬರು ವಿದ್ಯುತ್‌ ತಂತಿ ತಗುಲು ಮೃತಪಟ್ಟಿದ್ದಾರೆ,

ಮೃತಳನ್ನು ರೇಣುಕಾಬಾಯಿ ಭಾಗಣ್ಣ ನಾಟೀಕಾರ (37) ಬಳ್ಳುಂಡಗಿ ಎಂದು ಗುರುತಿಸಲಾಗಿದೆ.

ರೇಣುಕಾಬಾಯಿ ಅವರು ಗ್ರಾಮದ ಹೊಲಕ್ಕೆ ಕೂಲಿ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಮಳೆ–ಗಾಳಿಯಿಂದ ಹರಿದು ನೆಲಕ್ಕೆ ಬಿದ್ದ ವಿದ್ಯುತ್ ಎಲ್‌ಟಿ ಲೈನ್‌ ತುಳಿದು ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಪರಿಹಾರಕ್ಕೆ ಆಗ್ರಹ: ಮೃತ ರೇಣುಕಾಬಾಯಿ ನಾಟೀಕಾರ ಅವರ ನಿಧನದಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಮಕ್ಕಳು ಅನಾಥರಾಗಿದ್ದಾರೆ. ಕೂಡಲೇ ಜೆಸ್ಕಾಂ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ಪಿಎಸ್‌ಐ ಗಜಾನಂದ ಬಿರಾದಾರ ಭೇಟಿ ನೀಡಿದ್ದು, ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT