ಗುರುವಾರ , ಅಕ್ಟೋಬರ್ 29, 2020
27 °C

ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ಸಿಕ್ಕು ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ತಾಂಡಾ ಬಳಿ ಹಳ್ಳ ದಾಟಲು ಹೋದ ಶಾಂತಾಬಾಯಿ ಹೊಬು ರಾಠೋಡ (40) ಎಂಬ ಮಹಿಳೆ ಮುಳುಗಿ ‌ಸಾವಿಗೀಡಾಗಿದ್ದಾರೆ‌.

ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋಗಿದ್ದ ಮಹಿಳೆ ವಾಪಸ್ ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದರು. ಹಳ್ಳದ ದಡದ ಮರದ ಕೊಂಬೆಯಲ್ಲಿ ಸೋಮವಾರ ಬೆಳಿಗ್ಗೆ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಕಮಲಾಪುರ ‌ಪೊಲೀಸರು ಭೇಟಿ ‌ನೀಡಿ ಪರಿಶೀಲನೆ ನಡೆಸಿದರು.

ಭಾನುವಾರವಷ್ಟೇ ಜಿಲ್ಲೆಯ ಶಹಾಬಾದ್ ನ ಅಜನಿ ಹಳ್ಳದಲ್ಲಿ ಮುಳುಗಿ ‌ಇಬ್ಬರು ಬಾಲಕರು ಸಾವಿಗೀಡಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು