ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿ ಆತ್ಮಹತ್ಯೆ; ವಿಷ ಕುಡಿದ ಪತಿ

Last Updated 24 ನವೆಂಬರ್ 2020, 3:15 IST
ಅಕ್ಷರ ಗಾತ್ರ

ಆಳಂದ: ತಾಲ್ಲೂಕಿನ ಕವಲಗಾ ಗ್ರಾಮದಲ್ಲಿ ಸೋಮವಾರ ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದು ಪತಿ ಕೂಡ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಜಯಶ್ರೀ ಸಿಂಗೆ (40) ಆತ್ಮಹತ್ಯೆಗೆ ಶರಣಾದವರು. ಪತಿಯೊಂದಿಗೆ ಜಗಳ ನಡೆದಾಗ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸುದ್ದಿ ತಿಳಿದ ಪತಿ ಪಾಂಡುರಂಗ ಸಿಂಗೆ (44) ಸಹನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ದಂಪತಿಗೆ ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ನಿಂಬರ್ಗಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT