ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕಾರಾತ್ಮಕ ಮನೋಭಾವ ಅಗತ್ಯ- ಕುಲಪತಿ ಪ್ರೊ. ದಯಾನಂದ ಅಗಸರ

Last Updated 9 ಮಾರ್ಚ್ 2022, 8:44 IST
ಅಕ್ಷರ ಗಾತ್ರ

ಕಲಬುರಗಿ: ಮಹಿಳೆಯರು ಸಮಾಜದ ಬಗ್ಗೆ ಸಕಾರಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇತ್ತ ಸಮಾಜವೂ ಮಹಿಳೆ ಉನ್ನತ ಸ್ಥಾನಕ್ಕೆ ಏರುವ ಪೂರಕ ವಾತಾವರಣವನ್ನು ನಿರ್ಮಿಸಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಅಭಿಪ್ರಾಯಪಟ್ಟರು.

ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ನಡೆಯುತ್ತಿರುವ ಎನ್‌ಎಸ್‌ಎಸ್‌ ರಾಷ್ಟ್ರೀಯ ಭಾವೈಕ್ಯ ಶಿಬಿರದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮಹಿಳೆ ನಿಸರ್ಗದ ಅದ್ಭುತ ಸೃಷ್ಟಿಯಾಗಿದ್ದಾಳೆ. ಮಾತೃಭೂಮಿಗೆ ಸಮನಾದ ಸ್ಥಾನವನ್ನು ಮಹಿಳೆಗೆ ನೀಡಲಾಗಿದೆ. ಪುರುಷರು ಮಹಿಳೆಯರನ್ನು ಸಮಾನವಾಗಿ ಕಾಣಬೇಕು. ಲಿಂಗ ಸಮಾನತೆ ಹೆಚ್ಚು ಅವಶ್ಯವಾಗಿದೆ. ಮಹಿಳೆಯರು ಹೆಚ್ಚು ಆತ್ಮವಿಶ್ವಾಸದಿಂದ ಮುನ್ನಡೆದರೆ ಸಮಾಜ, ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೆ ಹೋಗಬಹುದಾಗಿದೆ’ ಎಂದರು.

ಕುಲಸಚಿವ ಶರಣಬಸಪ್ಪ ಕೋಟೆಪ್ಪಗೋಳ, ಎನ್‌ಎಸ್‌ಎಸ್‌ ಸಂಯೋಜಕ ಡಾ. ರಮೇಶ ಲಂಡನಕರ್, ಮಂಗಳೂರು ಯೇನಪೋಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಬೆಂಚ್ ಬೆನ್ನಿ, ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯದ ವಿಜಯಕುಮಾರಿ, ರಾಯಚೂರು ಕೃಷಿ ವಿಶ್ವವಿದ್ಯಾಲಯದ ಅಮೃತಾ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT