ಮಂಗಳವಾರ, ಅಕ್ಟೋಬರ್ 20, 2020
21 °C

ನ್ಯಾಯಾಂಗ ತನಿಖೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಉತ್ತರ ಪ್ರದೇಶದ ಹಾಥರಸ್‍ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಭಾರತೀಯ ಮಹಿಳಾ ಒಕ್ಕೂಟ ನೇತೃತ್ವದಲ್ಲಿ ಮಹಿಳೆಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಅಕ್ಕಮಹಾದೇವಿ ಆಶ್ರಮದ ಪ್ರಭುಶ್ರೀ ತಾಯಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು, ಈ ಮೂಲಕ ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ಸಂದೇಶ ರವಾನಿಸಬೇಕು ಎಂದು ಆಗ್ರಹಿಸಿದರು.

‘ಅಮಾನುಷ ಕೃತ್ಯವನ್ನು ಬಯಲಿಗೆ ಬಾರದಂತೆ ತಡೆಯುವ ಪ್ರಯತ್ನ ಮಾಡಲಾಯತು. ಮನಿಷಾಳ ಮೃತ ದೇಹವನ್ನು ಪೋಷಕರಿಗೆ ಹಸ್ತಾಂತರಿಸದೇ ದಹಿಸಿ ಉತ್ತರ ಪ್ರದೇಶ ಪೊಲೀಸರು ಅಮಾನವೀಯವಾಗಿ ವತ್ರಸಿದ್ದಾರೆ. ಶವ ಪೋಷಕರಿಗೆ ನೀಡದಿರುವುದು ಮತ್ತು ವಿರೋಧ ಪಕ್ಷ ಹಾಗೂ ಮಾಧ್ಯಮ ಪ್ರತಿನಿಧಿಗಳನ್ನು ಪೋಷಕರ ಭೇಟಿಗೆ ಬಿಡದಿದ್ದುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪದ್ಮಾವತಿ ಮಾಲಿಪಾಟೀಲ, ಶಿವಲಿಂಗಮ್ಮ ಲಂಡನಕರ್, ವಿಜಯಲಕ್ಷ್ಮಿ ಯಳಸಂಗಿ, ಪ್ರತಿಭಾ ಕುಲಕರ್ಣಿ, ಜನಾಬಾಯಿ ವಗ್ಗಿ, ರುಕ್ಮಿಣಿ, ಚಂದಮ್ಮ, ಜಗದೇವಿ, ಪ್ರತಿಭಾ ಕುಲಕರ್ಣಿ ಇತರರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.