ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರ್ಮಿಕರು ಒಂದಾಗಿ ಹೋರಾಟಕ್ಕೆ ಮುಂದಾಗಿ: ಪದ್ಮಾವತಿ

Published 19 ಆಗಸ್ಟ್ 2024, 3:24 IST
Last Updated 19 ಆಗಸ್ಟ್ 2024, 3:24 IST
ಅಕ್ಷರ ಗಾತ್ರ

ಕಲಬುರಗಿ: ‘ಕಾರ್ಮಿಕರು ಒಂದಾಗಿ ಹೋರಾಟಕ್ಕೆ ಮುಂದಾಗಿ ನಮ್ಮ ಹಕ್ಕನ್ನು ಪಡೆದುಕೊಳ್ಳಬೇಕು’ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ(ಸಿಪಿಐ) ನಗರ ಘಟಕದ ಅಧ್ಯಕ್ಷೆ ಪದ್ಮಾವತಿ ಎನ್‌. ಮಾಲಿಪಾಟೀಲ ಹೇಳಿದರು.

ನಗರದ ಎಐಟಿಯುಸಿ ಕಚೇರಿಯ ಎದುರುಗಡೆ ನಡೆದ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್(ಎಐಟಿಯುಸಿ) ನಗರ ಹಾಗೂ ತಾಲ್ಲೂಕು ಘಟಕದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತ ಹಾಗೂ ಕಾರ್ಮಿಕರ ವಿರುದ್ಧ ಕಾನೂನುಗಳನ್ನು ತಿದ್ದುಪಡಿ ಮಾಡಿ ಕಾರ್ಮಿಕರನ್ನು ಮೂಲೆಗುಂಪು ಮಾಡುತ್ತಿವೆ. ಎಐಟಿಯುಸಿ ಸಂಘಟನೆಯು ಕಾರ್ಮಿಕ ಪರವಾದ ಚಳವಳಿಗಳನ್ನು ರೂಪಿಸಿ ನ್ಯಾಯ ಒದಗಿಸಿ ಕೊಟ್ಟಿರುವುದು ಹೆಮ್ಮೆಯ ವಿಷಯ. ಸಂಘಟನೆಯು ಸಿದ್ಧಾಂತದೊಂದಿಗೆ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ಮಾಡಿ ಸರ್ವರಿಗೂ ನ್ಯಾಯ ಒದಗಿಸಿಕೊಡಬೇಕು’ ಎಂದು ಮಾರ್ಮಿಕವಾಗಿ ಹೇಳಿದರು.

ಎಚ್‌.ಎಸ್‌. ಪತಕಿ ಅಧ್ಯಕ್ಷತೆ ವಹಿಸಿದ್ದರು. ಹೋರಾಟಗಾರರಾದ ಪ್ರಭುದೇವ ಯಳಸಂಗಿ, ಸಿದ್ದಪ್ಪ ಪಾಲ್ಕಿ, ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ, ಶಿವಲಿಂಗಮ್ಮ ಲೇಂಗಟಿಕರ, ಅನಿತಾ ಭಕರೆ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಮಹೇಶಕುಮಾರ ರಾಠೋಡ, ರೈತ ಹೋರಾಟಗಾರರಾದ ಮೌಲಾ ಮುಲ್ಲಾ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಟ್ಟಡ, ಟೇಲರಿಂಗ್ ಕಾರ್ಮಿಕರು, ಅಂಗನವಾಡಿ, ಬಿಸಿ ಊಟ, ಆಟೊ ಯೂನಿಯನ್, ಕೆಎಸ್‌ಆರ್‌ಟಿಸಿ ಕಾರ್ಮಿಕರು ಸೇರಿದಂತೆ ಅನೇಕ ಜನ ಉಪಸ್ಥಿತರಿದ್ದರು.

ಪದಾಧಿಕಾರಿಗಳ ಆಯ್ಕೆ:

ಇದೇ ಸಂದರ್ಭದಲ್ಲಿ ತಾಲ್ಲೂಕು ಹಾಗೂ ನಗರ ಘಟಕದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಶಿವಲಿಂಗಮ್ಮ ಲೆಂಗಟಿಕರ, ಉಪಾಧ್ಯಕ್ಷರಾಗಿ ಓಂಕಾರ, ಅನಿತಾ ಭಕರೆ, ನಾಗಮ್ಮ ಗುಡ್ಡಾ, ಕಾರ್ಯದರ್ಶಿಯಾಗಿ ತಿಪ್ಪಣ್ಣ ಎಂಪೂರೆ, ಸಹ ಕಾರ್ಯದರ್ಶಿಗಳಾಗಿ ಮೊಹಮ್ಮದ್, ಸಾಬಮ್ಮ ಹೊನ್ನಕಿರಣಿಗಿ, ಸುಜಾತ ದೊಡ್ಮನಿ, ಖಜಾಂಚಿಯಾಗಿ ಶರಣಮ್ಮ ಪೂಜಾರಿ, ಕಾನೂನು ಸಲಹೆಗಾರರಾಗಿ ಹಣಮಂತರಾಯ ಅಟ್ಟೂರ, ಭೀಮಾಶಂಕರ ಮಾಡ್ಯಾಳ ಆಯ್ಕೆಯಾದರು. ಸಂಘಟನೆಯ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT