ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಬೈಸಿಕಲ್ ದಿನಾಚರಣೆ; ಜಿಮ್ಸ್ ವಿದ್ಯಾರ್ಥಿಗಳಿಂದ ಸೈಕಲ್ ರ್‍ಯಾಲಿ

Published 3 ಜೂನ್ 2023, 13:41 IST
Last Updated 3 ಜೂನ್ 2023, 13:41 IST
ಅಕ್ಷರ ಗಾತ್ರ

ಕಲಬುರಗಿ: ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್‌)ಯಿಂದ ಶನಿವಾರ ನಗರದಲ್ಲಿ ಸೈಕಲ್ ರ್‍ಯಾಲಿ ಆಯೋಜಿಸಲಾಗಿತ್ತು.

ಜಿಮ್ಸ್‌ನಿಂದ ಆರಂಭಗೊಂಡ ರ್‍ಯಾಲಿ ಖರ್ಗೆ ಪೆಟ್ರೋಲ್ ಬಂಕ್‌, ಇಎಸ್‌ಐಸಿ ವೈದ್ಯಕೀಯ ಕಾಲೇಜು, ಗುಲಬರ್ಗಾ ವಿಶ್ವವಿದ್ಯಾಲಯ, ಬುದ್ಧ ವಿಹಾರ ಮಾರ್ಗವಾಗಿ 14 ಕಿ.ಮೀ ಸಂಚರಿಸಿ ಮರಳಿ ಜಿಮ್ಸ್‌ಗೆ ಬಂದು ಕೊನೆಗೊಂಡಿತು.

ರ್‍ಯಾಲಿಯಲ್ಲಿ ಸಂಸ್ಥೆಯ ಸುಮಾರು 60 ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಸಿಬ್ಬಂದಿ ಸೈಕಲ್ ತುಳಿಯುವ ಮೂಲಕ ಪರಿಸರ ಜಾಗೃತಿ ಮೂಡಿಸಲು ಪ್ರಯತ್ನಿಸಿದರು.

ಜಿಮ್ಸ್ ಆವರಣದಲ್ಲಿ ರ್‍ಯಾಲಿಗೆ ಚಾಲನೆ ನೀಡಿ ಮಾತನಾಡಿದ ಸಂಸ್ಥೆಯ ನಿರ್ದೇಶಕಿ ಡಾ. ಕವಿತಾ ಪಾಟೀಲ ಅವರು, ‘ಸೈಕಲ್ ಸರಳ, ಕೈಗೆಟುಕುವ, ಸ್ವಚ್ಛ ಮತ್ತು ಪರಿಸರಕ್ಕೆ ಹೊಂದಿಕೊಳ್ಳುವ ಸುಸ್ಥಿರ ಸಾರಿಗೆ ಸಾಧನವಾಗಿದೆ. ಶಾರೀರಿಕವಾಗಿ ಆರೋಗ್ಯವಾಗಿರಲು ಸೈಕಲ್ ಸವಾರಿ ಉತ್ತಮ ನಡವಳಿಕೆಯಾಗಿದೆ’ ಎಂದರು. ಅಲ್ಲದೇ, ಬೈಸಿಕಲ್ ಬಳಕೆಯ ಪ್ರಯೋಜನವನ್ನು ವಿದ್ಯಾರ್ಥಿಗಳಿಗೆ ಒತ್ತಿ ಹೇಳಿದರು.

ಇದೇ ಸಂದರ್ಭದಲ್ಲಿ ಫಿಟ್‌ನೆಸ್ ಮತ್ತು ವಿವಿಧ ದೈಹಿಕ ಚಟುವಟಿಕೆಗಳ ಕುರಿತು ಸಹ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT