ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ನ್ಯಾಯಾಧೀಶ ಎಸ್.ಆರ್.ಮಾಣಿಕ್ಯ ಸಲಹೆ

7

ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ನ್ಯಾಯಾಧೀಶ ಎಸ್.ಆರ್.ಮಾಣಿಕ್ಯ ಸಲಹೆ

Published:
Updated:
Deccan Herald

ಕಲಬುರ್ಗಿ: ಯುವಕರು ಭ್ರಮಾ ಲೋಕದಿಂದ ಹೊರಬಂದು, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್.ಮಾಣಿಕ್ಯ ಹೇಳಿದರು.

ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಶೇ 50ರಷ್ಟು ಮಾನಸಿಕ ಕಾಯಿಲೆಗಳು ಯುವಕರಲ್ಲಿ ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ’ ಎಂದರು.

ಒತ್ತಡದ ಜೀವನಶೈಲಿ, ಆಹಾರ ಕ್ರಮ ಮತ್ತು ದಿನಚರಿಯಲ್ಲಿ ಆಗಿರುವ ಬದಲಾವಣೆ, ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಯುವಕರು ಖಿನ್ನತೆಗೆ ಒಳಗಾಗುತ್ತಿದ್ದಾರೆ. ಮಾನಸಿಕ ಕಾಯಿಲೆಗಳಿಗೆ ಖಿನ್ನತೆ ಮೂಲಕ ಕಾರಣ ಎಂದು ಹೇಳಿದರು.

‘ಯುವಕರು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಪೋಷಕರು ಬುದ್ಧಿವಾದ ಹೇಳಿದರು ಎಂಬ ಕಾರಣಕ್ಕೆ ಏಳನೇ ತರಗತಿ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದು ಇಂದಿನ ಮಕ್ಕಳು ಮಾನಸಿಕವಾಗಿ ಎಷ್ಟು ದುರ್ಬಲಕರು ಎಂಬುದಕ್ಕೆ ಸಾಕ್ಷಿ’ ಎಂದರು.

ಸೂಕ್ಷ್ಮ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಆತ್ಮಹತ್ಯೆ ಎಲ್ಲದಕ್ಕೂ ಪರಿಹಾರ ಅಲ್ಲ’ ಎಂದು ಹೇಳಿದರು.

ಮಾನಸಿಕ ಅಸ್ವಸ್ಥರಿಗೆ ಕಾನೂನಿನ ನೆರವು ಬೇಕಾದರೆ ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಕೆ.ಶರಣಪ್ಪ ಮಾತನಾಡಿ, ಮಾನಸಿಕ ಖಿನ್ನತೆ ಆರೋಗ್ಯ ಸಮಸ್ಯೆಯಾಗಿ ಬೆಳೆದು ನಿಂತಿದೆ. ದೇಶದಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿರುವುವವರಲ್ಲಿ ಹೆಚ್ಚಿನ ಸಂಖ್ಯೆಯವರು ಯುವಕರು. ಅದರಲ್ಲೂ ಖಿನ್ನತೆ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ’ ಎಂದರು.

ಮಕ್ಕಳು ತಂತ್ರಜ್ಞಾನವನ್ನು ಒಳ್ಳೆಯ ಕೆಲಸಗಳಿಗೆ ಬಳಸಿಕೊಳ್ಳಬೇಕು. ಪೋಷಕರು ಮಕ್ಕಳ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು ಎಂದು ಸಲಹೆ ನೀಡಿದರು.

ಜಿಮ್ಸ್‌ನ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಪ್ರಭುಕಿರಣ ವಿ.ಗೋಗಿ ಮಾತನಾಡಿ, ನಿಯಮಿತ ವ್ಯಾಯಾಮ, ಶಿಸ್ತಿನ ಜೀವನ ಶೈಲಿ ಅಳವಡಿಸಿಕೊಂಡರೆ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಂತರಾವ ಮಲಾಜಿ ಮಾತನಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !