ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯರು ಸಮಾಜದ ಬೇರುಗಳಿದ್ದಂತೆ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಶಶಿ ಅಭಿಮತ
Last Updated 2 ಅಕ್ಟೋಬರ್ 2021, 1:47 IST
ಅಕ್ಷರ ಗಾತ್ರ

ಕಲಬುರ್ಗಿ: ಹಿರಿಯ ನಾಗರಿಕರು ಸಮಾಜದ ಗಟ್ಟಿ ಬೇರುಗಳಿದ್ದಂತೆ. ಸದೃಢ ಸಮಾಜ ಕಟ್ಟಬೇಕಾದರೆ ಹಿರಿಯರ ಮಾರ್ಗದರ್ಶನ ಅತ್ಯಗತ್ಯ ಎಂದುಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಶಶಿ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿನಗರದ ಜಿಲ್ಲಾ ಪಂಚಾಯಿತಿ ಹೊಸ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಉತ್ತಮ ತಂದೆ ತಾಯಿ ಹಾಗೂ ಅಜ್ಜಅಜ್ಜಿಯಿಂದ ಮಾತ್ರ ಉತ್ತಮ ಮಕ್ಕಳನ್ನು ಬೆಳೆಸಲು ಸಾಧ್ಯ. ಹಿರಿಯರು ಮಕ್ಕಳಿಗೆ ಮೌಲ್ಯಯುತ ಬದುಕು ರೂಪಿಸಬೇಕು.ಮುಂದಿನ ಪೀಳಿಗೆಯನ್ನು ತಿದ್ದಿ, ತೀಡಿ ಜವಾಬ್ದಾರಿಯುತ ಸಮಾಜ ಕಟ್ಟಬೇಕು. ಮಕ್ಕಳು ಕೂಡ ಹಿರಿಯರ ಆದರ್ಶವನ್ನು ಪಾಲಿಸಬೇಕು ಎಂದು ಹೇಳಿದರು.

ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆ (ಕಾಡಾ) ಅಧ್ಯಕ್ಷ ಶರಣಪ್ಪ ತಳವಾರ ಮಾತನಾಡಿ,ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಿರಿಯ ನಾಗರಿಕರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಅವುಗಳ ಸದುಪಯೋಗ ಪಡೆದುಹಿರಿಯರು ನೆಮ್ಮದಿಯ ಜೀವನ ಸಾಗಿಸಬೇಕು ಎಂದು ಹೇಳಿದರು.

ಸಹಾಯವಾಣಿಗೆ ಚಾಲನೆ: ಕಾರ್ಯಕ್ರಮದಲ್ಲಿ ಎಲ್ಡರ್ ಲೈನ್ (ಹಿರಿಯ ನಾಗರಿಕರ ಸಹಾಯವಾಣಿ ಸಂಖ್ಯೆ 14567) ಸೇವೆಗೆ ಚಾಲನೆ ನೀಡಲಾಯಿತು. ಹಿರಿಯ ನಾಗರಿಕರ ಸಮಸ್ಯೆಗೆ ಸ್ಪಂದಿಸುವುದು, ಕಾನೂನು ಸಲಹೆ, ಆಪ್ತ ಸಲಹೆ ನೀಡಲು ಈ ಸೇವೆ ಆರಂಭಿಸಲಾಗಿದೆ.

ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ನೀರಾವರಿ ಯೋಜನೆಗಳ ಕಲಬುರ್ಗಿ ವಲಯದ ಅಧ್ಯಕ್ಷ ಹರ್ಷವರ್ಧನ ಗು. ಗುಗಳೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನವೀನಕುಮಾರ, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಸಾದಿಕ್ ಹುಸೇನ್ ಖಾನ್, ವಕೀಲ ರಾಜೇ ಶಿವಶರಣಪ್ಪ, ಶಿವರುದ್ರ ಟ್ರಸ್ಟ್ ಹಿರಿಯ ನಾಗರಿಕರ ಸಹಾಯವಾಣಿಯ ಅಧ್ಯಕ್ಷ ಮಾಳಿಂಗ ಮಹಾಗಾಂವಕರ್, ರಾಷ್ಟ್ರೀಯ ಬಂಜಾರ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಕಲಾವತಿ ಜಾಧವ್, ಅಫ್ಜಲ್ ಪಾಷಾ, ಅಮರೇಶ್ ನಾಯ್ಕ, ಪ್ರಕಾಶ್ ಜಾಧವ,ಶಾರದಾಬಾಯಿ ಹಾಗೂ ಹಿರಿಯ ನಾಗರಿಕರ ಸ್ವಯಂ ಸೇವಾ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅಂಧ ಮಕ್ಕಳ ಸರ್ಕಾರಿ ಶಾಲೆಯ ಶಿಕ್ಷಕರಾದ ಜಗದೀಶ ಹಾಗೂ ಶ್ರೀಕಾಂತ ನಾಡಗೀತೆ ಹಾಡಿದರು. ಮುರುಳೀಧರ ಕುಲಕರ್ಣಿ ಪ್ರಾಥನಾ ಗೀತೆ ಹಾಡಿದರು. ಪ್ರಕಾಶ ಭಜಂತ್ರಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT