ಗುರುವಾರ , ಮೇ 13, 2021
19 °C

ಸಾಹಿತಿ ಹೇಮಂತ ಕೊಲ್ಹಾಪುರೆ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಇಲ್ಲಿನ ನೂತನ ವಿದ್ಯಾಲಯದ ನಿವೃತ್ತ ಪ್ರಾಚಾರ್ಯ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ, ಹಾಸ್ಯ ಕಲಾವಿದ ಹೇಮಂತ ಕೊಲ್ಹಾಪುರೆ (63) ಅವರು ಶನಿವಾರ ಹೃದಯಾಘಾತದಿಂದ ನಿಧನರಾದರು.

ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಲು ಕಲಬುರ್ಗಿ ರೈಲು ನಿಲ್ದಾಣಕ್ಕೆ ಬಂದಿದ್ದ ಅವರಿಗೆ ಹೃದಯಾಘಾತವಾಯಿತು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಪುತ್ರಿ ಇದ್ದಾರೆ. ಅವರ ಅಂತ್ಯಕ್ರಿಯೆ ನಗರದ ಚಿತ್ತಾರಿ ಅಡ್ಡೆ ಹತ್ತಿರವಿರುವ ರುದ್ರಭೂಮಿಯಲ್ಲಿ ಭಾನುವಾರ ಬೆಳಿಗ್ಗೆ 11 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹೇಮಂತ ಕೊಲ್ಲಾಪುರೆ ಅವರು ನೂತನ ವಿದ್ಯಾಲಯ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ನಂತರ ಪ್ರಾಚಾರ್ಯರಾಗಿ 30 ವರ್ಷ ಸೇವೆ ಸಲ್ಲಿಸಿದ್ದಾರೆ. ಹಾಸ್ಯ, ಸಾಹಿತ್ಯ, ನಾಟಕ, ಕಲೆ ಮುಂತಾ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ್ದ ಅವರು, ಆಕಾಶವಾಣಿ, ದೂರದರ್ಶನಗಳಲ್ಲಿ ನಾಟಕಗಳನ್ನು ನಿರ್ದೇಶಿಸಿ ಅಭಿನಯಿಸಿದ್ದಾರೆ. ಚಲನಚಿತ್ರಗಳಲ್ಲೂ ನಟಿಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ.‌ ಎಂಟು ಪುಸ್ತಕಗಳೂ ಪ್ರಕಟಗೊಂಡಿವೆ.

ಉತ್ತಮ ವಾಗ್ಮಿಯೂ ಆಗಿದ್ದ ಅವರು, ಹಾಸ್ಯಭಾಷಣ, ಹಾಸ್ಯಬರಹ, ಶಾಯರಿ ಪಠಣದಲ್ಲಿಯೂ ಹೆಸರು ಮಾಡಿದ್ದರು. ನಟ, ನಿರ್ದೇಶಕ, ನಾಟಕಕಾರರಾಗಿ 40 ವರ್ಷಗಳಿಂದ ರಂಗಭೂಮಿಯಲ್ಲಿಯೂ ಕೃಷಿ ಮಾಡಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು