ಯಡ್ರಾಮಿ: ಗ್ಯಾಸ್, ಡಿಸೇಲ್ ಬೆಲೆಗಳನ್ನು ಇಳಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತೀಯ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ತಾಲ್ಲೂಕು ಘಟಕ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಸಿಪಿಐ ತಾಲ್ಲೂಕು ಕಾರ್ಯದರ್ಶಿ ಭೀಮರಾಯ ಮುದಬಸಪ್ಪಗೋಳ, ‘ಕೇಂದ್ರ ಸರ್ಕಾರ ಜನಸಾಮಾನ್ಯರು ಬಳಕೆ ಮಾಡುತ್ತಿರುವ 5 ಕೆ.ಜಿ ಸಿಲಿಂಡರ್, ವಾಣಿಜ್ಯ ಬಳಕೆಯ ಸಿಲಿಂಡರ್, ಕೈಗಾರಿಕೆಗಳಲ್ಲಿ ಬಳಸುವ ಡಿಸೇಲ್ ಹಾಗೂ ವಿಮಾನಕ್ಕೆ ಬಳಸುವ ಪೆಟ್ರೋಲ್ ಬೆಲೆ ಏರಿಕೆ ಮಾಡಿರುವ ಕ್ರಮ ಸರಿಯಾದುದಲ್ಲ. ಹಾಗಾಗಿ ಹೆಚ್ಚಿಸಿರುವ ಬೆಲೆಗಳನ್ನು ಇಳಿಸುವಂತೆ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು’ ಎಂದು ಆಗ್ರಹಿಸಿದರು.

‘ಒಂದೆಡೆ ಗ್ರಾಮೀಣ ಭಾಗದ ಜನ ಬೆಲೆ ಏರಿಕೆಯಿಂದ 14 ಕೆ.ಜಿ ಸಿಲಿಂಡರ್ ಬಳಸಲಾಗದ ಸ್ಥಿತಿ ನಿರ್ಮಾಣವಾದರೆ, ಇನ್ನೊಂದೆಡೆ ಬೆಲೆ ಏರಿಕೆಯಿಂದಾಗಿ ಹೋಟೆಲ್ನವರು ಆಹಾರ ಪದಾರ್ಥಗಳ ದರ ಹೆಚ್ಚಿಸಿದ್ದಾರೆ. ಹೊಟ್ಟೆ ಆಸರೆಗಾಗಿ ಹೋಟೆಲ್ಗಳನ್ನೆ ನೆಚ್ಚಿಕೊಂಡಿರುವ ಪಟ್ಟಣಗಳಲ್ಲಿ ವಾಸಿಸುವ ಬಡ ಕೂಲಿಕಾರ್ಮಿಕರು ಊಟ ಮಾಡಿದ ಬಿಲ್ ಪಾವತಿಸಲಾಗುತ್ತಿಲ್ಲ’ ಎಂದು ಪರಿಸ್ಥಿತಿಯನ್ನು ವಿವರಿಸಿದರು.

‘ಬೆಲೆ ಏರಿಕೆಯಿಂದಾಗಿ ಜನರ ಬದುಕಿನ ಮೇಲೆ ಬರೆ ಎಳೆದಂತಾಗಿದೆ. ಸದ್ಯದ ಸ್ಥಿತಿಯಲ್ಲಿ ಜೀವನ ನಿರ್ವಹಣೆ ಕಷ್ಟವಾಗುತ್ತಿದ್ದು, ಕೇಂದ್ರದ ಈ ನೀತಿಯ ವಿಚಾರವಾಗಿ ರಾಷ್ಟ್ರಪತಿಗಳು ಮಧ್ಯಪ್ರವೇಶ ಮಾಡಿ ಜನರ ನೆರವಿಗೆ ಬರಬೇಕು’ ಎಂದು ಮನವಿ ಮಾಡಿದರು.

ಈ ವೇಳೆ ಸಿಪಿಐ ಜಿಲ್ಲಾ ಕಾರ್ಯದರ್ಶಿ ಮಹೇಶಕುಮಾರ ರಾಠೋಡ, ಪಕ್ಷದ ಕಾರ್ಯಕರ್ತರು ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-31-700668055

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.