ಕೆಂಭಾವಿ: ಜಿಲ್ಲೆಯಾದ್ಯಂತ ಜನಗಣತಿ ಪ್ರಕ್ರಿಯೆ ಆರಂಭಗೊಂಡಿದ್ದು, ಬುಧವಾರ ಕೆಂಭಾವಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಭೇಟಿ ನೀಡಿ ಪರಿಶೀಲಿಸಿದರು.

ಮನೆಗಳ ಮ್ಯಾಪಿಂಗ್ ಕೆಲಸ ಮುಗಿದಿದೆ. ಮನೆಗಳಿಗೆ ತೆರಳಿ ಗಣತಿದಾರರು ಮಾಹಿತಿ ಪಡೆಯುತ್ತಿದ್ದಾರೆ. ಸಾರ್ವಜನಿಕರು ಗಣತಿದಾರರಿಗೆ ನಿಖರ ಮಾಹಿತಿ ನೀಡಿ ಸಹಕರಿಸಬೇಕು ಎಂದ ಅವರು ಬಿಸಿಲು ಹೆಚ್ಚಾಗಿರುವುದರಿಂದ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಹೆಚ್ಚು ಕೆಲಸ ಮಾಡಿ ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಬಾಗಲಿ ಅವರಿಂದ ಗಣತಿ ಕುರಿತು ಮಾಹಿತಿ ಪಡೆದು, ಅಚ್ಚುಕಟ್ಟಾಗಿ ಗಣತಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.

ಗಣತಿ ಮೇಲ್ವಿಚಾರಕರಾದ ದತ್ತಾತ್ರೆಯ ಕುಲಕರ್ಣಿ, ಶ್ರೀಕಾಂತ, ಬಸವರಾಜ ಬಂಟನೂರ, ಸಿದ್ರಾಮಯ್ಯ ಇಂಡಿ, ಕಾಶಿನಾಥ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-30-436101009

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.