ಯಡ್ರಾಮಿ: ಪಟ್ಟಣ ಬಸ್ ನಿಲ್ದಾಣದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸುವುದು, ಬಳಬಟ್ಟಿ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಕೆಕೆಆರ್ಟಿಸಿಯ ಜೇವರ್ಗಿ ಬಸ್ ಘಟಕದ ಅಧಿಕಾರಿಗೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಈಚೆಗೆ ಮನವಿ ಸಲ್ಲಿಸಿದರು.

ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ ಬಸ್ ನಿಲ್ದಾಣದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು. ಅನೇಕ ವರ್ಷಗಳಿಂದ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಒಂದು ವಾರದಲ್ಲಿ ಬಸ್ ನಿಲ್ದಾಣದಲ್ಲಿ ಕ್ಯಾಮೆರಾ ಅಳವಡಿಸದಿಲ್ಲದೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಾಲ್ಲೂಕಿನ ಶಿವಪುರ, ಬಳಬಟ್ಟಿ, ಅಂಬರಖೇಡ, ಮಲ್ಲಾಬಾದ್ ಗ್ರಾಮಗಳಿಗೆ ಬಸ್ ಸೌಲಭ್ಯವಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ. ಯಡ್ರಾಮಿ ಪಟ್ಟಣಕ್ಕೆ ಸರ್ಕಾರಿ ಕೆಲಸಗಳಿಗೆ ಬರಬೇಕಾದರೆ ಇಜೇರಿ ಮೂಲಕವಾಗಿ ಬರಬೇಕಾದ ಸ್ಥಿತಿ ಇದೆ. ಹೀಗಾಗಿ ಯಡ್ರಾಮಿಯಿಂದ ಶಿವಪುರ ಮೂಲಕವಾಗಿ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕು ಘಟಕ ಗೌರವ ಅಧ್ಯಕ್ಷ ಸಾಂಭವಶಿವ ಎಂ ಹಿರೇಮಠ, ಮುಖಂಡ ಸಾಹೇಬಗೌಡ ದೇಸಾಯಿ, ಗುರಣ್ಣ ದೊಡ್ಡಮನಿ ಕಾಚಾಪುರ, ರೈತ ಹೋರಾಟಗಾರ ಯಲ್ಲಾಲಿಂಗ ಹರನಾಳ, ದೇವಿಂದ್ರ ನಾಯ್ಕೋಡಿ, ಹನುಮಂತ ಕೂಡಗಿ, ಸಯ್ಯದ್ ಮುಲ್ಲಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-31-681055900

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.