ಯಡ್ರಾಮಿ: ಪಟ್ಟಣ ಸೇರಿ ತಾಲ್ಲೂಕಿನ 62 ಹಳ್ಳಿಗಳಲ್ಲಿ ಮದ್ಯ ಅಕ್ರಮ ಮಾರಾಟ ಮಾಡಲಾಗುತ್ತಿದ್ದು, ಅದಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ತಾಲ್ಲೂಕು ಘಟಕ ವತಿಯಿಂದ ಬುಧವಾರ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇದೇ ವೇಳೆ ಮಾತನಾಡಿದ ಸಮಿತಿಯ ಪದಾಧಿಕಾರಿಗಳು ‘ತಾಲ್ಲೂಕಿನಲ್ಲಿ ಮದ್ಯ ಮಾರಾಟ ತಡೆಯುವ ಸಲುವಾಗಿ ಮೇ 15 ರಂದು ಬೆಳಿಗ್ಗೆ 11 ಗಂಟೆಗೆ 62 ಗ್ರಾಮದ ಜನಗಳನ್ನು ಒಳಗೊಂಡ ಯಡ್ರಾಮಿಯ ಸರ್ದಾರ್ ಶರಣಗೌಡ ವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ನಮ್ಮ ಸಂಘಟನೆ ಹಾಗೂ ಇತರ ಸಂಘಟನೆಗಳ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಅಂದಿನ ಪ್ರತಿಭಟನೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಜನರು ಭಾಗವಹಿಸುವ ನಿರೀಕ್ಷೆ ಇದೆ. ಹಾಗಾಗಿ ಯಡ್ರಾಮಿ ಪಟ್ಟಣ ಪಂಚಾಯಿತಿ ಅಧಿಕಾರಿ, ಅಬಕಾರಿ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಆಯಾ ಗ್ರಾಮಗಳ ಪಂಚಾಯಿತಿಗೆ ಸಂಬಂಧಪಟ್ಟ ಅಧಿಕಾರಿಗಳು ಹಾಜರಿರುವಂತೆ ಮನವಿ ಪತ್ರದಲ್ಲಿ ಕೋರಲಾಗಿದೆ.

ಈ ಸಂದರ್ಭದಲ್ಲಿ ತಾಲ್ಲೂಕು ಘಟಕ ಅಧ್ಯಕ್ಷ ಮಲ್ಲಿಕಾರ್ಜುನ ಆಂದೋಲ, ಮಹೇಶ ಪೂಜಾರಿ, ಸಿದ್ದನಗೌಡ ಯಂಕಂಚಿ, ರವಿ ರಾಮನೂರ, ವೆಂಕಟೇಶ ಬಾಲೂರ, ರಾಜು ಗೆಜ್ಜೆ, ನಿಂಗಪ್ಪ ಮ್ಯಾಗೇರಿ , ದಿಲೀಪ ಒಣಗಜ್ಜಿ, ಈರಪ್ಪ ಗೆಜ್ಜೆ ಸೇರಿದಂತೆ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-31-1823113927

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.