ಯಡ್ರಾಮಿ: ‘ಎಲ್ಲಾ ಧರ್ಮದ ಮುಖಂಡರು ಮತ್ತು ಸಾರ್ವಜನಿಕರು ಒಟ್ಟಾಗಿ ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಮಾಡಬೇಕು. ಯಾವುದೇ ಗೊಂದಲ, ಅಶಾಂತಿಗೆ ಆಸ್ಪದ ನೀಡಬಾರದು’ ಎಂದು ಇನ್ಸ್ಪೆಕ್ಟರ್ ವಿಶ್ವನಾಥ್ ಎಂ.ಮುದುರೆಡ್ಡಿ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

‘ಯಡ್ರಾಮಿ ಜನ ಶಾಂತಿ, ಸೌಹಾರ್ದಕ್ಕೆ ಹೆಸರಾದವರು. ಪಟ್ಟಣದಲ್ಲಿ ಈವರೆಗೆ ಯಾವುದೇ ಗಲಾಟೆ ನಡೆದಿಲ್ಲ. ಎಲ್ಲ ಹಬ್ಬಗಳಲ್ಲಿ ಶಾಂತಿ ಕಾಪಾಡಿಕೊಂಡು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಿದ್ದಾರೆ. ಇದೇ ಸಹಕಾರ ಮುಂದುವರಿಸಬೇಕು’ ಎಂದು ಮನವಿ ಮಾಡಿದರು.

‘ಹಬ್ಬದ ದಿನ ಯುವಕರಿಗೆ, ಹಿರಿಯರು ಬುದ್ಧಿ ಹೇಳಬೇಕು. ಮೆರವಣಿಗೆ ದಿನ ಯಾವುದೇ ಗೊಂದಲ ಉಂಟಾಗಬಾರದು. ಅಹಿತಕರ ಘಟನೆ ಕಂಡುಬಂದರೆ ಕಾನೂನು ಕೈಗೆ ತೆಗೆದುಕೊಳ್ಳದೆ ಪೊಲೀಸರ ಗಮನಕ್ಕೆ ತರಬೇಕು’ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಎಸ್.ಹಲಕರ್ಟಿ, ಕಾಂಗ್ರೆಸ್ ಮುಖಂಡ ಹಯ್ಯಾಳಪ್ಪ ಗಂಗಾಕರ, ಅಫ್ರೋಜ್ ಅತ್ನೂರ ಮಾತನಾಡಿದರು.

ಪೊಲೀಸ್ ಅಧಿಕಾರಿಗಳು ಹಾಗೂ ಪಟ್ಟಣದ ಮುಸ್ಲಿಂ ಸೇರಿ ಎಲ್ಲಾ ಧರ್ಮದ ಮುಖಂಡರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-31-856068975

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.