ತಾಲ್ಲೂಕಿನ ವಿವಿಧ ಗ್ರಾಮಗಳ ರಸ್ತೆಯ ದುಸ್ಥಿತಿ. ಗ್ರಾಮೀಣ ರಸ್ತೆಗಳನ್ನು ಜಿಲ್ಲಾ ರಸ್ತೆಗಳನ್ನಾಗಿ ಮೇಲ್ದರ್ಜೆಗೇರಿಸಿಲ್ಲ. ರಸ್ತೆಗಳಲ್ಲಿ ತಗ್ಗುಗುಂಡಿ ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಯಡ್ರಾಮಿ ತಾಲ್ಲೂಕು ಘೋಷಣೆಯಾಗಿ ಹಲವು ವರ್ಷಗಳೇ ಕಳೆದರೂ ಕ್ಷೇತ್ರದ ಶಾಸಕರು ಗ್ರಾಮೀಣ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿಲ್ಲ. ಯತ್ನಾಳ, ಬಳಬಟ್ಟಿ, ಅಂಬರಖೇಡ, ಮಾಣಶಿವಣಗಿ, ಬಿಳವಾರ ಸೇರಿದಂತೆ ಬಹುತೇಕ ಗ್ರಾಮಗಳ ರಸ್ತೆಗಳು ಹದಗೆಟ್ಟಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚಾರ ನಡೆಸುವಂತಾಗಿದೆ ಎನ್ನುತ್ತಾರೆ ಇಲ್ಲಿನ ಗ್ರಾಮಸ್ಥರು.