ಬುಧವಾರ, ಡಿಸೆಂಬರ್ 1, 2021
21 °C

ಕಲ್ಯಾಣ ಕರ್ನಾಟಕ ಉತ್ಸವ: ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕಲ್ಯಾಣ ‌ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ‌ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶೇಷ ವಿಮಾನದ ಮೂಲಕ ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಬೆಳಿಗ್ಗೆ 8ಕ್ಕೆ ಕಲಬುರ್ಗಿಗೆ ಬರಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ 45 ನಿಮಿಷ ತಡವಾಗಿ ‌ಬಂದಿದೆ.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತಕ್ಕೆ ತೆರಳಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಅಲ್ಲಿಂದ ನೇರವಾಗಿ ಪೊಲೀಸ್ ಪರೇಡ್ ಮೈದಾನಕ್ಕೆ ಬರಲಿದ್ದು, ಧ್ವಜಾರೋಹಣ ನೆರವೇರಿಸುವರು. ನಂತರ ಜಯದೇವ ಆಸ್ಪತ್ರೆ ಕಟ್ಟಡಕ್ಕೆ ಭೂಮಿ ಪೂಜೆ, ನಿರಂತರ ಕುಡಿಯುವ ನೀರು ಯೋಜನೆ ಸೇರಿದಂತೆ ‌ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವರು.

ನಗರದಲ್ಲಿ ‌ಬಿಗಿ‌ ಭದ್ರತೆ ಹೆಚ್ಚಿಸಲಾಗಿದೆ. ವಲ್ಲಭಭಾಯಿ ಪಟೇಲ್ ವೃತ್ತಕ್ಕೆ ತೆರಳುವ ಎಲ್ಲ ಮಾರ್ಗಗಳನ್ನು ‌ತಾತ್ಕಾಲಿಕವಾಗಿ ಸಾರ್ವಜನಿಕ ‌ಸಂಚಾರಕ್ಕೆ‌ ನಿರ್ಬಂಧಿಸಲಾಗಿದೆ.

ಮುಖ್ಯಮಂತ್ರಿ ಕಾರ್ಯಕ್ರಮವನ್ನು ಯೂಟ್ಯೂಬ್ ‌ಮೂಲಕ ನೇರ ಪ್ರಸಾರ ಮಾಡಲಾಗುತ್ತಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು