ಗುರುವಾರ , ಅಕ್ಟೋಬರ್ 22, 2020
25 °C

ಜೇವರ್ಗಿ: ಪ್ರವಾಹಕ್ಕೆ ಕೊಚ್ಚಿ ಹೋದ ಯುವಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜೇವರ್ಗಿ: ತಾಲ್ಲೂಕಿನ ನರಿಬೋಳ ಗ್ರಾಮದ ಭೀಮಾನದಿ ಪ್ರವಾಹಕ್ಕೆ ಯುವಕನೊಬ್ಬ ಕೊಚ್ಚಿಕೊಂಡು ಹೋದ ಬಗ್ಗೆ ವರದಿಯಾಗಿದೆ.

ಮಂಗಳವಾರ ಸಂಜೆ ಭಾಗಣ್ಣ ತಿಪ್ಪಣ್ಣ ಹಡಪದ (21) ಎಂಬ ಯುವಕ ನೀರು ತರಲು ನದಿಗೆ ತೆರಳಿದಾಗ ನದಿಯ ನೀರಿನ ರಭಸಕ್ಕೆ ಕಾಲು ಜಾರಿ ಕೊಚ್ಚಿಕೊಂಡು ಹೋಗಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಬುಧವಾರ ಘಟನಾ ಸ್ಥಳಕ್ಕೆ ತಹಶೀಲ್ದಾರ್ ಸಿದರಾಯ ಭೋಸಗಿ, ಪಿಎಸ್‍ಐ ಮಂಜುನಾಥ ಹೂಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೋಟ್ ಮೂಲಕ ಶವದ ಶೋಧ ಕಾರ್ಯ ನಡೆಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.