ಮಂಗಳವಾರ, ಅಕ್ಟೋಬರ್ 26, 2021
24 °C

ಪ್ರಿಯಾಂಕಾ ಬಂಧನ: ಯುವ ಕಾಂಗ್ರೆಸ್‌ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಉತ್ತರ ಪ್ರದೇಶ ಕಾಂಗ್ರೆಸ್‌ ಉಸ್ತುವಾರಿ ‍ಪ್ರಿಯಾಂಕಾ ವಾದ್ರಾ ಅವರನ್ನು ಬಂಧಿಸಿದ ಘಟನೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಯುವ ಘಟಕದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್‌ ಧ್ವಜ ಹಿಡಿದು ಮೆರವಣಿಗೆ ನಡೆಸಿದ ಕಾರ್ಯರ್ತರು, ಜಹತ್‌ ವೃತ್ತ, ಜಿಲ್ಲಾಧಿಕಾ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದರು. ಕೇಂದ್ರ ಸರ್ಕಾರ ಹಾಗೂ ಉತ್ತರಪ್ರದೇಶ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು.

ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಉತ್ತರ ಪ್ರದೇಶದ ಲಖೀಮಪುರ ಖೇರಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ಮೊಂಡುತನ ಕಾರಣ ಈ ಪ್ರತಿಭಟನೆಯಲ್ಲಿ ಭಾನುವಾರ ಹಿಂಸಾಚಾರ ನಡೆದಿದೆ. ಇದರಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಜನರು ಮೃತಪಟ್ಟಿದ್ದಾರೆ. ಇದರ ಹೊಣೆಯನ್ನು ಯೋಗಿ ಆದಿನಾಥ ಅವರ ಸರ್ಕಾರವೇ ಹೊರಬೇಕು ಎಂದು ಘೋಷಣೆ ಕೂಗಿದರು.

ರೈತರನ್ನು ಭೇಟಿಯಾಗಲು ಹೊರಟ ನಮ್ಮ ನಾಯಕಿ ಪ್ರಿಯಾಂಕಾ ವಾದ್ರಾ ಅವರನ್ನು ತಡೆಯಲು ಸರ್ಕಾರ ಅವರನ್ನು ಬಂಧಿಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ ತಕ್ಷಣ ಅವರನ್ನು ಬಿಡುಗಡೆ ಮಾಡಬೇಕು, ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಬೇಕು ಎಂದೂ ಆಗ್ರಹಿಸಿದರು.

 ಜಿಲ್ಲಾ ಕಾಂಗ್ರೆಸ್‌  ಯುವ ಘಟಕದ ಅಧ್ಯಕ್ಷ ಶಿವಾನಂದ ಹೊನಗುಂಟಿ, ಮುಖಂಡರಾದ ಈರಣ್ಣ ಝಳಕಿ, ಪರಾಜ ಕಮುರಲ್ ಇಸ್ಲಾಂ, ಲತಾ ರಾಠೋಡ, ವಾಣಿಶ್ರೀ ಸಗರಕರ್, ಶರಣು ಡೋಣಗಾಂವ, ಪರುಸುರಾಮ ನಾಟಿಕರ, ಅಶೋಕ ಕಪ್ಪನೂರ, ಅಸವಿನ ಸಂಕಾ, ಅಮರ ಶಿರವಾಳ, ಹರಶದ್ ಖಾನ್, ರಕಿಬ್, ಸಂತೋಷ ನಾಟಿಕರ್, ಮಹೇಶ, ಮಸ್ತಾನ್ ಪಠಾಣ ನೇತೃತ್ವ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು