ಸೋಮವಾರ, ಸೆಪ್ಟೆಂಬರ್ 27, 2021
23 °C

ಕಲಬುರ್ಗಿ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ತಾಲ್ಲೂಕಿನ ಆಲಗೂಡ ಗ್ರಾಮದಲ್ಲಿ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. 

ಸಂತೋಷ ಹೂಗಾರ (30) ಕೊಲೆಯಾದ ಯುವಕ. ಕಲಬುರ್ಗಿ ರಾಮ ನಗರದ ನಿವಾಸಿಯಾಗಿದ್ದ ಸಂತೋಷ ಭಾನುವಾರ ಮುಂಜಾನೆ ಮನೆಯಿಂದ ಹೊರಹೋಗಿದ್ದ. 

ಸೋಮವಾರ ಶವವಾಗಿ ಪತ್ತೆಯಾಗಿದ್ದಾನೆ.‌ ಪರಿಚಿತರಿಂದಲೇ ಈತ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ‌ಘಟನಾ ಸ್ಥಳಕ್ಕೆ 'ಸಿ' ಉಪವಿಭಾಗದ ಎಸಿಪಿ ಜೆ.ಎಚ್.ಇನಾಂದಾರ, ಗ್ರಾಮೀಣ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಬಾಸು ಚವ್ಹಾಣ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಕಲಬುರ್ಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು