ಭಾನುವಾರ, ಜೂನ್ 13, 2021
25 °C

ಯುವಕನಿಗೆ ಚಾಕುವಿನಿಂದ ಇರಿದು ಕೊಲೆ: ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ನಗರದ ಪಬ್ಲಿಕ್‌ ಗಾರ್ಡನ್‌ ಎದುರಿನ ರಸ್ತೆಯಲ್ಲಿ ಗುರುವಾರ ನಾಲ್ವರು ದುಷ್ಕರ್ಮಿಗಳ ತಂಡವೊಂದು ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದೆ.

ರಾಣೇಶಫಿರ್ ದರ್ಗಾ ನಿವಾಸಿ, ಎಸ್‌ಬಿಆರ್‌ ಕಾಲೇಜಿನ ವಿದ್ಯಾರ್ಥಿ ವೀರೇಶ ಶರಣಬಸಪ್ಪ ಕಡಗಂಚಿ (21) ಕೊಲೆಯದವರು. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ವೀರೇಶಗೆ ಬಲವಾಗಿ ಚಾಕುವಿನಿಂದ ಇರಿದಿದ್ದಾರೆ. ಎಷ್ಟೋ ಹೊತ್ತು ರಕ್ತದ ಮಡುವಿನಲ್ಲೇ ಬಿದ್ದಿದ್ದ ವೀರೇಶಗೆ ಸಾರ್ವಜನಿಕರು ನೀರು ಕುಡಿಸಲು ಯತ್ನಿಸಿ, ಆಂಬುಲೆನ್ಸ್‌ಗೆ ಕರೆ ಮಾಡಿ ಮಾಹಿತಿ ನೀಡಿದರು.

‘ತೀವ್ರ ರಕ್ತಸ್ರಾವವಾದ್ದರಿಂದ ಆಸ್ಪತ್ರೆಗೆ ಕರೆದೊಯ್ದ ಕೆಲ ಹೊತ್ತಿನಲ್ಲಿ ವೀರೇಶ ಮೃತಪಟ್ಟರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರಪುಡಿ ಅಂಬು, ಭವನ್, ಕಾಳು ಮತ್ತು ದಾದು ಎಂಬುವರು ಕೃತ್ಯವನ್ನೆಸಗಿದ್ದಾರೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ’ ಎಂದು ಕಲಬುರ್ಗಿ ಪೊಲೀಸ್‌ ಕಮಿಷನರ್‌ ಸತೀಶಕುಮಾರ್ ಎನ್. ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು