ಸೋಮವಾರ, ಮೇ 23, 2022
30 °C

ಜಿಪಂ ಸಿಇಒ ಡಾ.ಗಿರೀಶ್ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಗಿರೀಶ್ ಡಿ. ಬದೋಲೆ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಸಿ.ಇ.ಒ ಡಾ.ದಿಲೀಷ್ ಶಶಿ ಅವರು ಅಧಿಕಾರ ಹಸ್ತಾಂತರಿಸಿದರು.

2018ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಡಾ.ಗಿರೀಶ್ ಡಿ. ಬದೋಲೆ ಅವರು ಮಹಾರಾಷ್ಟ್ರದ ಉಸ್ಮಾನಾಬಾದ್‌ ಜಿಲ್ಲೆ ಉಮರ್ಗಾ ತಾಲ್ಲೂಕು ಕಸಗಿ ಗ್ರಾಮದವರು. ಎಂಬಿಬಿಎಸ್ ಪದವೀಧರರಾಗಿರುವ ಅವರು ಒ.ಎನ್.ಜಿ.ಸಿ ಸಂಸ್ಥೆಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಐ.ಎ.ಎಸ್. ಪ್ರೊಬೇಷನರಿ ಅವಧಿ ಪೂರ್ಣಗೊಳಿಸಿರುವ ಇವರು, ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ನಿರ್ಗಮಿತ ಸಿ.ಇ.ಒ ಡಾ.ದಿಲೀಷ್ ಶಶಿ ಅವರು 15 ತಿಂಗಳು ಕಲಬುರಗಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಎಂಬಿಬಿಎಸ್‌ ಪದವೀಧರರೇ ಸಿಇಒಗಳು; ನಿರ್ಗಮಿತ ಸಿ.ಇ.ಒ ಡಾ.ದಿಲೀಷ್ ಶಶಿ, ಹಿಂದಿನ ಸಿಇಒ ಆಗಿದ್ದ ಡಾ.ಪಿ.ರಾಜಾ ಹಾಗೂ ಈಗ ಅಧಿಕಾರ ಸ್ವೀಕರಿಸಿರುವ ಡಾ. ಗಿರೀಶ್ ಡಿ. ಬದೋಲೆ ಅವರು ಎಂ.ಬಿ.ಬಿ.ಎಸ್ ಪದವೀಧರರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು