ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲೆ ಪ್ರಕರಣ: ಜಿ.ಪಂ. ಸದಸ್ಯ ಕೂಡಲಗಿ ನ. 27ರವರೆಗೆ ನ್ಯಾಯಾಂಗ ಬಂಧನಕ್ಕೆ

Last Updated 19 ನವೆಂಬರ್ 2019, 14:49 IST
ಅಕ್ಷರ ಗಾತ್ರ

ಕಲಬುರ್ಗಿ: ಜೇವರ್ಗಿ ತಾಲ್ಲೂಕಿನ ಮಯೂರ ಗ್ರಾಮದ ಬಿಜೆಪಿ ಮುಖಂಡ ಶಿವಲಿಂಗ ಭಾವಿಕಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬಂಧಿತರಾಗಿರುವ ಜಿಲ್ಲಾ ಪಂಚಾಯಿತಿ ಸದಸ್ಯ ಶಾಂತಪ್ಪ ಕೂಡಲಗಿ ಅವರನ್ನು ಇದೇ 27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕೊಲೆಯಾದ ದಿನದಿಂದ ತಲೆಮರೆಸಿಕೊಂಡಿದ್ದ ಶಾಂತಪ್ಪಅವರನ್ನು ತಾಯಿ ಸಾಬವ್ವ ಅವರ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದರು. ಮಂಗಳವಾರ ಸಂಜೆಯವರೆಗೂ ನಗರದ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು. ಅವರನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು ಎಂದು ತನಿಖಾ ತಂಡದಲ್ಲಿರುವ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಕೂಡಲಗಿ ಅವರ ಬಂಧನದೊಂದಿಗೆ ಒಂಬತ್ತು ಜನರ ಪೈಕಿ ಆರು ಜನ ಆರೋಪಿಗಳನ್ನು ಬಂಧಿಸಿದಂತಾಗಿದೆ. ಉಳಿದ ಮೂವರ ಪತ್ತೆಗೆ ಹುಡುಕಾಟ ಮುಂದುವರಿದಿದೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಕಳೆದ ನ 5ರಂದು ನಗರದ ಹೊರವಲಯದ ಶರಣ ಸಿರಸಗಿ ಗ್ರಾಮದ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಶಿವಲಿಂಗ ಭಾವಿಕಟ್ಟಿ ಅವರನ್ನು ಗುಂಪೊಂದು ಕೊಲೆ ಮಾಡಿತ್ತು. ಈ ಕೊಲೆ ಆರೋಪದ ಮೇರೆಗೆ ಕೂಡಲಗಿ ಅವರನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT