ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಸಂಘ: ಇಂದಿನಿಂದ ಕಪ್ಪು ಪಟ್ಟಿ ಧರಿಸಿ ಸೇವೆ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಿರ್ಣಯ
Last Updated 21 ಅಕ್ಟೋಬರ್ 2021, 8:32 IST
ಅಕ್ಷರ ಗಾತ್ರ

ಕಲಬುರಗಿ: ‘ಪದವೀಧರ ಶಿಕ್ಷಕರ ಸಮಸ್ಯೆ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 21 ರಿಂದ 29ರವರೆಗೆ ಕಪ್ಪು ಪಟ್ಟಿ ಧರಿಸಿ ಶಾಲಾ ಶೈಕ್ಷಣಿಕ ಚಟುವಟಿಕೆ ನಿರ್ವಹಿಸುವ ಮೂಲಕಸರ್ಕಾರದ ಗಮನ ಸೆಳೆಯಲಾಗುತ್ತದೆ’ ಎಂದು ಕರ್ನಾಟಕ ರಾಜ್ಯ
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಿಳಿಸಿದೆ.

‘ಅ.4ರಿಂದ ತರಬೇತಿ ಬಹಿಷ್ಕಾರ ಮುಂದುವರೆದಿದೆ. ಅ.29ರೊಳಗೆ ಬೇಡಿಕೆ ಈಡೇರಿಸದಿದ್ದರೆ, ಅ.30ರಿಂದ ನ.11ರ ವರೆಗೆ ಮಧ್ಯಾಹ್ನದ ಬಿಸಿಯೂಟದ ಮಾಹಿತಿಯನ್ನು ನೀಡದೇ ಅಸಹಕಾರ ಚಳವಳಿ ನಡೆಸಲಾಗುವುದು’ ಎಂದು ಸಂಘದ ಅಧ್ಯಕ್ಷ ಮಲ್ಲಯ್ಯ ಬಿ.ಗುತ್ತೇದಾರ ಹಾಗೂ ಪ್ರಧಾನ ಕಾರ್ಯದರ್ಶಿಬಾಬು ಮೌರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ನ.11ರಿಂದ 18ರ ವರೆಗೆ ಸ್ಯಾಟ್ಸ್‌ (SATS) ಮಾಹಿತಿಯನ್ನು ಅಪ್‌ಲೋಡ್ ಮಾಡದೇ ಶಿಕ್ಷಕರ ಸಮಸ್ಯೆ ಕುರಿತು ಗಮನ ಸೆಳೆಯುವುದು, ಒಂದುದಿನದ ರಾಜ್ಯಮಟ್ಟದ ರ‍್ಯಾಲಿ ನಡೆಸುವುದು, ತರಗತಿ ಬಹಿಷ್ಕಾರ ಹಾಗೂ ಶಾಲಾ ಬಹಿಷ್ಕಾರಕ್ಕೂ ಮುಂದಾಗಲಾಗುವುದು’ ಎಂದು ಅವರು ತಿಳಿಸಿದ್ದಾರೆ.

‘ಮುಖ್ಯಗುರುಗಳಿಗೆ 15, 20 ಮತ್ತು 25 ವರ್ಷಗಳ ವೇತನ ಬಡ್ತಿ,ನೂತನ ಪಿಂಚಣಿ ಯೋಜನೆ ರದ್ದತಿ, ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ, ದೈಹಿಕ ಶಿಕ್ಷಣ ಶಿಕ್ಷಕರ ಸಮಸ್ಯೆ ಬಗೆಹರಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT