ಕಲಬುರ್ಗಿ: ನಗರ ಹೊರವಲಯದ ಕೆಸರಟಗಿ ಬಳಿ ದರೋಡೆಕೋರನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಇರ್ಫಾನ್ (25)ನ ಕಾಲಿಗೆ ಗುಂಡು ತಗುಲಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ತಡರಾತ್ರಿ ಇಲ್ಲಿನ ಬಿದ್ದಾಪುರ ಕ್ರಾಸ್ ಬಳಿ ಅಮರ್ ವೈನ್ಸ್ ವ್ಯವಸ್ಥಾಪಕನ ಮೇಲೆ ಹಲ್ಲೆ ಮಾಡಿ ನಗದು, ಮೊಬೈಲ್ ಮತ್ತು ಬೈಕ್ ಕಿತ್ತುಕೊಂಡಿದ್ದರು.

ಇರ್ಫಾನ್ ಜತೆ ಇನ್ನಿಬ್ಬರು ಈ ಕೃತ್ಯದಲ್ಲಿ ಭಾಗಿಯಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶುಕ್ರವಾರ ಬೆಳಿಗ್ಗೆ ದರೋಡೆಕೋರರನ್ನು ಬಂಧಿಸಲು ತೆರಳಿದ್ದ ಫರಹತಾಬಾದ್ ಮತ್ತು ಕಲಬುರ್ಗಿ ಗ್ರಾಮೀಣ ಠಾಣೆ ಪೊಲೀಸರ ಮೇಲೆ ದರೋಡೆಕೋರರು ಇಟ್ಟಿಗೆ ಮತ್ತು ಮಾರಕಾಸ್ತ್ರಗಳಿಂದ ದಾಳಿ ಮಾಡಿದರು. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡಿನ ದಾಳಿ ಮಾಡಿದ್ದಾರೆ.

ದರೋಡೆಕೋರರ ಹಲ್ಲೆಯಿಂದ ಪಿಎಸ್‌ಐ ವಾಹಿದ್ ಕೋತ್ವಾಲ್, ಕಾನ್ ಸ್ಟೆಬಲ್‌ಗಳಾದ ಕೇಶವ ಮತ್ತು ಬಾದಷಾ ಅವರಿಗೆ ಸಣ್ಣಪುಟ್ಟ ಗಾಯ ಗಳಾಗಿದ್ದು ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಈಶಾನ್ಯ ವಲಯ ಐಜಿಪಿ ಅಲೋಕಕುಮಾರ್, ಎಸ್ಪಿ ಎನ್.ಶಶಿಕುಮಾರ್ ಭೇಟಿ ನೀಡಿದರು. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.