ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಹೆಚ್ಚಳ: ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ರದ್ದು

Last Updated 19 ಏಪ್ರಿಲ್ 2021, 21:12 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಕೋವಿಡ್‌ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚುತ್ತಿರುವುದರಿಂದ ಐತಿಹಾಸಿಕ ಬೆಂಗಳೂರು ‘ಕರಗ ಶಕ್ತ್ಯೋತ್ಸವ’ವನ್ನು ರದ್ದುಪಡಿಸಿ, ಬೆಂಗಳೂರು ನಗರ ಜಿಲ್ಲಾಧಿಕಾರಿಜೆ.ಮಂಜುನಾಥ್ ಆದೇಶ ಹೊರಡಿಸಿದ್ದಾರೆ.

‘ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ವ್ಯಾಪಕ ವಾಗಿ ಹರಡುತ್ತಿರುವುದನ್ನು ನಿಯಂತ್ರಿ ಸಲು ಸರ್ಕಾರದ ಆದೇಶದ ಅನ್ವಯ ಧಾರ್ಮಿಕ ಆಚರಣೆಗಳನ್ನು ನಿಷೇಧಿ ಸಲಾಗಿದ್ದು, ರಾತ್ರಿ ಕರ್ಫ್ಯೂ ಜಾರಿ ಯಲ್ಲಿದೆ’.

‘ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷವೂ ನಡೆಯುವ ಬೆಂಗಳೂರಿನ ಕರಗವೆಂದೇ ಖ್ಯಾತಿ ಪಡೆದಿರುವ ‘ದ್ರೌಪದಿ ದೇವಿಯ ಕರಗ ಶಕ್ತ್ಯೋತ್ಸವ’ವನ್ನು ಈ ಬಾರಿ ರದ್ದು ಪಡಿಸಲಾಗಿದೆ.ಹಾಗಾಗಿ, ಕರಗ ಆಚರಣೆಗೆ ಅವಕಾಶ ಇರುವುದಿಲ್ಲ. ಭಕ್ತಾದಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು’ ಎಂದು ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕೋವಿಡ್‌ ಸೋಂಕು ಹರಡುವಿಕೆ ನಿಯಂತ್ರಿಸಲು ಲಾಕ್‌ಡೌನ್‌ ಜಾರಿಯಲ್ಲಿದ್ದ ಕಾರಣ ಕಳೆದ ವರ್ಷ ಕರಗವನ್ನು ಸಾಂಕೇತಿಕವಾಗಿ ಆಚರಿಸಲಾಗಿತ್ತು. ಜನಜಂಗುಳಿ ಸೇರಿಸಲು ಅವಕಾಶ ಕಲ್ಪಿಸಿರಲಿಲ್ಲ. ಈ ಬಾರಿ ಉತ್ಸವ ಆಚರಣೆ ಮಾಡುವ ಬಗ್ಗೆ ದೇವಸ್ಥಾನಕ್ಕೆ ಸಂಬಂಧಿಸಿದ ಪ್ರಮುಖರ ಜೊತೆಗೆ ಬಿಬಿಎಂಪಿ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಇತ್ತೀಚೆಗೆ ಸಭೆ ನಡೆಸಿದ್ದರು. ನಿರ್ಬಂಧಿತ
ವಾತಾವರಣದಲ್ಲಿ ಇದೇ 19ರಿಂದ 27ರವರೆಗೆ ಕರಗ ಮಹೋತ್ಸವ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿತ್ತು. ನಗರದಲ್ಲಿ ಇತ್ತೀಚೆಗೆ ನಿತ್ಯ 10 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೋವಿಡ್ ಸೊಂಕು ಕಾಣಿಸಿಕೊಳ್ಳು ತ್ತಿರುವುದರಿಂದ ಈ ನಿರ್ಧಾರ ದಿಂದಲೂ ಜಿಲ್ಲಾಡಳಿತ ಹಿಂದಕ್ಕೆ ಸರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT