ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೌಚಗುಂಡಿ ಸ್ವಚ್ಛಗೊಳಿಸಲು ಮಾನವ ಶಕ್ತಿ ಬಳಕೆ

ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜನಪ್ರತಿನಿಧಿಗಳ ಕಳವಳ
Last Updated 11 ಡಿಸೆಂಬರ್ 2019, 17:30 IST
ಅಕ್ಷರ ಗಾತ್ರ

ಶಿವಮೊಗ್ಗ:ಗ್ರಾಮೀಣ ಪ್ರದೇಶಗಳಲ್ಲಿ ಶೌಚಗುಂಡಿ ಸ್ವಚ್ಛಗೊಳಿಸಲು ಈಗಲೂ ಮಾನವ ಶಕ್ತಿ ಬಳಸಲಾಗುತ್ತಿದೆ.ತಕ್ಷಣ ಈ ಪ್ರವೃತ್ತಿಗೆ ಕಡಿವಾಣ ಹಾಕಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಬುಧವಾರ ನಡೆದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆ ಸೂಚಿಸಿತು.

ವಿಷಯ ಪ್ರಸ್ತಾಪಿಸಿದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎ.ಕಾಂತೇಶ್,ನಗರ ಪ್ರದೇಶಗಳಲ್ಲಿನ ಶೌಚಗುಂಡಿ ಸ್ವಚ್ಚಗೊಳಿಸಲು ಸ್ಥಳೀಯ ಸಂಸ್ಥೆಗಳು ಸಕ್ಕಿಂಗ್ ಯಂತ್ರ ಬಳಸುತ್ತಿವೆ. ಹಳ್ಳಿಗಳಲ್ಲೂ ಅದೇ ಮಾದರಿ ಅಳವಡಿಸಬೇಕು. ಪ್ರತಿ ತಾಲ್ಲೂಕಿಗೆ ಕನಿಷ್ಠ ಎರಡು ಸಕ್ಕಿಂಗ್ ಯಂತ್ರ ಖರೀದಿಸಬೇಕು.ಬಳಸಲು ಅನುಕೂಲವಾಗುವಂತೆ ಸುಸ್ಥಿತಿಯಲ್ಲಿ ಇಡಬೇಕು ಎಂದು ತಾಕೀತು ಮಾಡಿದರು.

ಶಿವಮೊಗ್ಗ ತಾಲ್ಲೂಕು ಭದ್ರಾಪುರದಲ್ಲಿ ಆಶ್ರಯ ಯೋಜನೆ ಮನೆ ಕಳಪೆಯಾಗಿದೆ. ಮಳೆಯಿಂದಾಗಿ ನೆಲಕೊಚ್ಚಿ ಹೋಗಿದೆ. ಮನೆದುರಸ್ತಿ ಮಾಡುವವರೆಗೆ ಗುತ್ತಿಗೆದಾರರಿಗೆ ಹಣ ಪಾವತಿಸಬಾರದು ಎಂದು ಸೂಚಿಸಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪೂರ್ಣಗೊಂಡ ಗ್ರಾಮಗಳಿಗೆ ನೀರಿನ ಘಟಕ ಲೋಕಾರ್ಪಣೆಗೊಳಿಸಬೇಕು. ಬಾಕಿ ಕಾಮಗಾರಿ ತ್ವರಿತವಾಗಿಪೂರ್ಣಗೊಳಿಸಬೇಕು.ಪ್ರಸಕ್ತ ಸಾಲಿನಎಸ್ಸೆಸ್ಸೆಲ್ಸಿಪರೀಕ್ಷಾ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೇಅಗ್ರಸ್ಥಾನ ಪಡೆಯುವಂತೆ ಶ್ರಮಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಎಲ್ಲಾ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಎಸ್.ಕುಮಾರ್‌ ಮಾತನಾಡಿ,ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯಗಳಲ್ಲಿ ಸಾಕಷ್ಟು ಸಮಸ್ಯೆಗಳಿವೆ.ಎಲ್ಲ ಸಮಸ್ಯೆಗಳನ್ನೂ ತಕ್ಷಣ ಸರಿಪಡಿಸಬೇಕು. ಹಾಸ್ಟೆಲ್‍ಗಳಲ್ಲಿ ಬಿಸಿನೀರು ಒದಗಿಸಬೇಕು.ವಸತಿನಿಲಯಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಅವರು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಕಿರಣ್‍ಕುಮಾರ್‌ ಮಾತನಾಡಿ, ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೆ ಪರಿಹಾರ ಕೋರಿ47,474 ರೈತರುಅರ್ಜಿ ಸಲ್ಲಿಸಿದ್ದಾರೆ. ಆನ್‍ಲೈನ್‍ನಲ್ಲಿಅಪಲೋಡ್‌ ಮಾಡಲಾಗಿದೆ. 16ಸಾವಿರ ಅರ್ಜಿದಾರರಿಗೆ ₨ 14 ಕೋಟಿ ಸಹಾಯಧನ ವಿತರಿಸಲಾಗಿದೆ. ಅನುದಾನ ಬಿಡುಗಡೆಯಾದ ತಕ್ಷಣಬಾಕಿಅರ್ಜಿಗಳ ಫಲಾನುಭವಿಗಳಿಗೆ ಸಹಾಯಧನ ವಿತರಣೆಮಾಡಲಾಗುವುದು ಎಂದು ಮಾಹಿತಿ ನೀಡಿದರು.

ತೀರ್ಥಹಳ್ಳಿ, ಸಾಗರ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಗಳುಮೃತಪಟ್ಟಿವೆ.ಕಳೆದ ಸಾಲಿನಲ್ಲಿ ಆದ ಸಾವು-ನೋವುಗಳು, ಅಹಿತಕರ ಘಟನೆಗಳು ಮರುಕಳಿಸದಂತೆ ಆರೋಗ್ಯ ಇಲಾಖೆ ಎಚ್ಚರವಹಿಸಬೇಕು. ಮಂಗನಕಾಯಿಲೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕುಎಂದುಕಾಂತೇಶ್ ಸೂಚನೆಗೆ ಪ್ರತಿಕ್ರಿಯಿಸಿದಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ, ಮಂಗನ ಕಾಯಿಲೆ ವ್ಯಾಪಿಸದಂತೆ ಕ್ರಮ ಕೈಗೊಳ್ಳಲಾಗಿದೆ. ಜನರಲ್ಲಿ ಕಾಯಿಲೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ಆಯೋಜಿಸಲಾಗುತ್ತಿದೆ. ಜನರಲ್ಲಿ ಅರಿವು ಮೂಡಿಸಲು ಆಶಾ ಕಾರ್ಯಕರ್ತೆಯರು ಸಕ್ರಿಯರಾಗಿದ್ದಾರೆ. ಅಗತ್ಯಕ್ಕೆ ತಕ್ಕಷ್ಟು ಔಷಧದ ದಾಸ್ತಾನು ಮಾಡಲಾಗಿದೆ ಎಂದು ವಿವರ ನೀಡಿದರು.

ಜಿಲ್ಲೆಯ ಆಯ್ದ 116 ಪ್ರೌಢಶಾಲೆಗಳಿಗೆಶುದ್ಧ ನೀರಿನ ಘಟಕ ವಿತರಿಸಲಾಗುವುದು ಎಂದುಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಾಸರವಳ್ಳಿ ಶ್ರೀನಿವಾಸ್, ಎಚ್.ಪಿ.ನರಸಿಂಗನಾಯ್ಕ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT