ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ 9 ಜನರಿಗೆ ಶಂಕಿತ ಮಂಗನಕಾಯಿಲೆ

Last Updated 29 ಏಪ್ರಿಲ್ 2019, 17:48 IST
ಅಕ್ಷರ ಗಾತ್ರ

ಶಿವಮೊಗ್ಗ:ಸಾಗರ ತಾಲ್ಲೂಕು ಅರಳಗೋಡು ಸುತ್ತಲ ಗ್ರಾಮಗಳ 9 ಜನರಲ್ಲಿ ಶಂಕಿತ ಮಂಗನಕಾಯಿಲೆ ರೋಗ ಲಕ್ಷಣಗಳು ಇರುವುದು ಮಂಗಳವಾರ ಪತ್ತೆಯಾಗಿದೆ.

9 ಜನರಲ್ಲಿ ಇಬ್ಬರಿಗೆ ಸೋಂಕು ತಗುಲಿರುವುದು ಇದು ಎರಡನೇ ಬಾರಿ. ಜ್ವರದಿಂದ ಬಳಲುತ್ತಿರುವ ಎಲ್ಲರನ್ನೂ ಸರ್ಕಾರಿ ಅಂಬುಲೆನ್ಸ್‌ನಲ್ಲಿ ಮಣಿಪಾಲದ ಕಸ್ತೂರ ಬಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.ಆನಂದಪುರ, ಗೌತಮ‍ಪುರ, ಕಲ್ಮನೆ ಭಾಗಗಳಲ್ಲಿ ಸತ್ತ ಮಂಗಗಳು ಪತ್ತೆಯಾಗಿವೆ.

ಹಬ್ಬದ ದಿನವೂ ಕೆಲಸ: ಆರೋಗ್ಯ ಇಲಾಖೆಯ30ಕ್ಕೂ ಹೆಚ್ಚು ಸಿಬ್ಬಂದಿ ಮಕರ ಸಂಕ್ರಮಣದ ದಿನವೂ ಜನರಿಗೆ ಮಂಗನಕಾಯಿಲೆ ನಿರೋಧಕ ಲಸಿಕೆ ಹಾಕುವ ಕಾರ್ಯದಲ್ಲಿ ತೊಡಗಿದ್ದರು.

ಇದುವರೆಗೆ 60 ಜನರಿಗೆ ಮಂಗನಕಾಯಿಲೆ ಇರುವುದು ದೃಢಪಟ್ಟಿದೆ. 50 ಜನರು ಗುಣಮುಖರಾಗಿದ್ದಾರೆ ಎಂದು ಸಾಗರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT