ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ 6 ಮಂದಿಗೆ ಮಂಗನ ಕಾಯಿಲೆ ದೃಢ

ಕಾರ್ಗಲ್‌ನಲ್ಲಿ 3, ತೀರ್ಥಹಳ್ಳಿ ತಾಲ್ಲೂಕಿನಲ್ಲಿ 3
Last Updated 17 ಮಾರ್ಚ್ 2020, 10:04 IST
ಅಕ್ಷರ ಗಾತ್ರ

ಕಾರ್ಗಲ್: ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಇಬ್ಬರು ರೋಗಿಗಳಲ್ಲಿ ಭಾನುವಾರ ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿದೆ.

ವಾರ್ಡ್ ನಂ.11ರ ತಳಕಳಲೆ ಕುಗ್ರಾಮದ ಹೆನ್ನಿ ಮಜಿರೆಯ ಹಂಜಕ್ಕಿ ನಿವಾಸಿಯಾದ ವೀರರಾಜಯ್ಯ ಜೈನ್ (45) ಮತ್ತು ಮರಾಠಿಕೇರಿಯ ಸವಿತಾ ಶ್ರೀಧರ (11) ಅವರಲ್ಲಿ ಕೆಎಫ್‌ಡಿ ಲಕ್ಷಣಗಳು ಕಂಡುಬಂದ ಕಾರಣ ಅವರು ಸ್ವಯಂ ಪ್ರೇರಣೆಯಿಂದ ಮಣಿಪಾಲ ಆಸ್ಪತ್ರೆಗೆ ಭಾನುವಾರ ದಾಖಲಾಗಿದ್ದರು. ಸೋಮವಾರ ದೊರೆತ ರಕ್ತ ಪರೀಕ್ಷಾ ವರದಿಯಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಡವಳ್ಳಿ ನಿವಾಸಿಯಾದ ಲೋಕರಾಜ್ ಜೈನ್ (35) ಎಂಬುವರಲ್ಲಿಯೂ ಮಂಗನ ಕಾಯಿಲೆ ದೃಢಪಟ್ಟಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅರಳಗೋಡು ಆಸ್ಪತ್ರೆ ಮೂಲಗಳು ತಿಳಿಸಿವೆ.

ತೀರ್ಥಹಳ್ಳಿ ವರದಿ: ತಾಲ್ಲೂಕು ವ್ಯಾಪ್ತಿಯಲ್ಲಿ 3 ಮಂದಿಗೆ ಮಂಗನ ಕಾಯಿಲೆ ಇರುವುದು ಸೋಮವಾರ ದೃಢಪಟ್ಟಿದೆ. ಇದರಿಂದಾಗಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಯಿಂದ ಬಳಲುತ್ತಿರುವವರ ಒಟ್ಟು ಸಂಖ್ಯೆ 76ಕ್ಕೆ ಏರಿದಂತಾಗಿದೆ.

ಭಾನುವಾರ ಇಬ್ಬರಲ್ಲಿ ಹಾಗೂ ಸೋಮವಾರ ಒಬ್ಬರಲ್ಲಿ ಮಂಗನ ಕಾಯಿಲೆ ವೈರಾಣು ಇರುವುದು ಪತ್ತೆಯಾಗಿದೆ. ಬಾಂಡ್ಯ -ಕುಕ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕೆ ಗ್ರಾಮದ ಒಬ್ಬರಲ್ಲಿ, ಕಟ್ಟೆಹಕ್ಕಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟಗಾರು ಗ್ರಾಮದ ಒಬ್ಬರು ಹಾಗೂ ಮಂಡಗದ್ದೆ ವ್ಯಾಪ್ತಿಯ ಒಬ್ಬರಲ್ಲಿ ಮಂಗನ ಕಾಯಿಲೆ ವೈರಾಣು ಇರುವುದು ದೃಢಪಟ್ಟಿದೆ. ಪಟ್ಟಣದ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆ ಒಬ್ಬರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT