ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾರಂಗಿ ಜಲಾಶಯ ಭರ್ತಿಗೆ‌ 10 ಅಡಿ ಬಾಕಿ

Published 7 ಜುಲೈ 2024, 16:16 IST
Last Updated 7 ಜುಲೈ 2024, 16:16 IST
ಅಕ್ಷರ ಗಾತ್ರ

ಕುಶಾಲನಗರ: ಹಾರಂಗಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಾವೇರಿ ಕಣಿವೆಯ ಹಾರಂಗಿ ಅಣೆಕಟ್ಟೆಗೆ ನೀರಿನ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಜಲಾಶಯ ಭರ್ತಿಯಾಗಲು ಕೇವಲ 10 ಅಡಿ ಬಾಕಿ ಇದೆ.

ಗರಿಷ್ಠ 2,859 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಭಾನುವಾರ ಸಂಜೆ 4 ಗಂಟೆಗೆ 2,848.18 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಕಳೆದ ಕೆಲವು ದಿನಗಳಿಂದ ಮಡಿಕೇರಿ, ಮದಾಪುರ ಹಾಗೂ ಸೋಮವಾರಪೇಟೆ ಸೇರಿದಂತೆ ಜಲಾನಯನ ಪ್ರದೇಶದಲ್ಲಿ ಮುಂಗಾರು ಬಿರುಸುಗೊಂಡಿದೆ.

‘ಜಲಾಶಯಕ್ಕೆ 2,054 ಕ್ಯೂಸೆಕ್‌ ನೀರಿನ ಒಳ ಹರಿವು ಇದ್ದು, ನದಿಗೆ 200 ಕ್ಯುಸೆಕ್‌ ಹರಿಸಲಾಗುತ್ತಿದೆ. ಇದೀಗ 5.51 ಟಿಎಂಸಿ ಅಡಿ ನೀರು ಸಂಗ್ರಹಗೊಂಡಿದೆ. ಮಳೆ ಬಿರುಸು ಪಡೆದರೆ ಮುಂದಿನ ವಾರದೊಳಗೆ ಜಲಾಶಯ ಭರ್ತಿಯಾಗಬಹುದು’ ಎಂದು ಅಣೆಕಟ್ಟು ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ತಿಳಿಸಿದ್ದಾರೆ.

ಕೃಷಿ ಚಟುವಟಿಕೆ ಚುರುಕು: ಹಾರಂಗಿ‌ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಮಳೆ ಬೀಳುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಜಲಾಶಯದಿಂದ ಜಿಲ್ಲೆಯ 12 ಗ್ರಾಮಗಳು ಪ್ರಯೋಜನ ಪಡೆಯುತ್ತವೆ. ಜೊತೆಗೆ ಮೈಸೂರು ಹಾಗೂ ಹಾಸನ ಜಿಲ್ಲೆಗಳ ಗಡಿಗ್ರಾಮಗಳಿಗೂ ಪ್ರಯೋಜನವಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT