ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದವನಿಗೆ 10 ವರ್ಷ ಶಿಕ್ಷೆ

Published 8 ಮೇ 2024, 4:51 IST
Last Updated 8 ಮೇ 2024, 4:51 IST
ಅಕ್ಷರ ಗಾತ್ರ

ಮಡಿಕೇರಿ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಅಪರಾಧಿ ಪುಟ್ಟರಾಜು (32) ಎಂಬಾತನಿಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯವು 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಈ ಕುರಿತು 2021ರಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐಗಳಾದ ರಾಮರೆಡ್ಡಿ, ಎಸ್.ಎನ್.ಜಯರಾಮ್, ಕೆ.ಎ.ಅಬ್ದಲ್ ಮಜೀದ್ ಪುಟ್ಟರಾಜುವನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಿ.ಪ್ರಶಾಂತಿ ಅವರು ಅಪರಾಧಿಗೆ ಶಿಕ್ಷೆ ವಿಧಿಸಿದರು.

ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಮಹಮ್ಮದ್ ಶೌಕತ್‌ ಅಲಿ ಅವರು ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT