ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಹ್ಯ ಅಗಸ್ತ್ಯೇಶ್ವರ ಸಹಕಾರ ಸಂಘಕ್ಕೆ ₹ 1.04 ಕೋಟಿ ಲಾಭ

Published 21 ಸೆಪ್ಟೆಂಬರ್ 2023, 13:57 IST
Last Updated 21 ಸೆಪ್ಟೆಂಬರ್ 2023, 13:57 IST
ಅಕ್ಷರ ಗಾತ್ರ

ಸಿದ್ದಾಪುರ: ‘ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪ್ರಸಕ್ತ ಸಾಲಿನಲ್ಲಿ ₹ 1.04 ಕೋಟಿ ಲಾಭ ಗಳಿಸಿದ್ದು, ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ’ ಎಂದು ಸಂಘದ ಅಧ್ಯಕ್ಷ ಎಂ.ಎಸ್ ವೆಂಕಟೇಶ್ ತಿಳಿಸಿದರು.

ಎಂ.ಜಿ ರಸ್ತೆಯಲ್ಲಿರುವ ಸಂಘದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕಳೆದ ಸಾಲಿನಲ್ಲಿ ಸಂಘವು ₹ 1.04 ಕೋಟಿ ಲಾಭ ಗಳಿಸಿದ್ದು, ಪ್ರಸಕ್ತ ಸಾಲಿನಲ್ಲಿ ₹ 213.58 ಕೋಟಿ ವ್ಯವಹಾರ ನಡೆಸಲಾಗಿದೆ. ಸಂಘದಲ್ಲಿ ಪಾಲು ಬಂಡವಾಳ ₹ 1.99 ಕೋಟಿ ಹಾಗೂ ಠೇವಣಿಗಳು ₹ 40.54 ಕೋಟಿ ಇದ್ದು, ಸದಸ್ಯರ ಹಾಗೂ ಆಡಳಿತ ಮಂಡಳಿಯ ಸಹಕಾರದೊಂದಿಗೆ ಉತ್ತಮ ರೀತಿಯಲ್ಲಿ ವ್ಯವಹರಿಸಿಕೊಂಡು ಹೋಗುತ್ತಿದೆ’ ಎಂದರು.

‘ಸಂಘದ ಸದಸ್ಯರ ಮಕ್ಕಳನ್ನು ಪ್ರೋತ್ಸಾಹಿಸುವ ಸಲುವಾಗಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿ.ಯು.ಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ₹ 2000 ಹಾಗೂ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ₹ 5000 ನೀಡುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಲು ಪ್ರೋತ್ಸಾಹ ನೀಡುತ್ತಿದೆ’ ಎಂದರು.

ಈ ಸಂದರ್ಭದಲ್ಲಿ ಸಂಘದಲ್ಲಿ ಅತ್ಯುತ್ತಮ ವ್ಯವಹಾರ ನಡೆಸಿದ ಸದಸ್ಯರಾದ ಕೆ.ಸಿ ಮೇರಿ, ಜನಾಬ್ ಮೊಯ್ದೀನ್ ಕೆ.ಎಂ, ಚೇನಂಡ ಬಿ. ಪೂಣಚ್ಚ ಅವರನ್ನು ಸನ್ಮಾನಿಸಲಾಯಿತು. ಕೃಷಿಯಲ್ಲಿ ಸಾಧನೆ ಮಾಡಿದ ಗುಹ್ಯ ಗ್ರಾಮದ ಮೂಕಂಡ ಉಜ್ವಲ್ ಪೂವಯ್ಯ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಬಿ ಪ್ರಸನ್ನ, ಸಹಕಾರಿ ಸಂಘದ ಉಪಾಧ್ಯಕ್ಷ ಎಂ .ಬಿಜಾಯ್, ಕೆ.ಕೆ ಚಂದ್ರಕುಮಾರ್, ಕೆ.ಎಸ್ ಸುನಿಲ್,ಪಿ.ಕೆ ಚಂದ್ರನ್, ಕೆ.ಸಿ ಮಿಲನ್, ವಿ.ಕೆ.ಬಸೀರ್, ಸಿ.ಎಂ ಚಾಕೋ, ಎಂ.ಸಿ.ವಾಸು, ಎಚ್.ಕೆ.ಚೆಲುವಯ್ಯ, ಎಸ್.ಬಿ.ಪ್ರತೀಶ್, ಎಂ.ಪಿ ಪ್ರಮೀಳಾ, ಕೆ.ಆರ್ ದೇವಯಾನಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT