ಮಡಿಕೇರಿ: ಕಳೆದ 15 ದಿನಗಳಿಂದ ಇಲ್ಲಿನ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಗೌಡ ಯುವ ವೇದಿಕೆ ವತಿಯಿಂದ ನಡೆಯುತ್ತಿದ್ದ ಗೌಡ ಲೆದರ್ಬಾಲ್ ಪ್ರೀಮಿಯರ್ ಲೀಗ್ (ಜಿಪಿಎಲ್) ಕ್ರಿಕೆಟ್ ಟೂರ್ನಿಗೆ ಭಾನುವಾರ ತೆರೆ ಬಿತ್ತು.

ಒಟ್ಟು 10 ಫ್ರಾಂಚೈಸಿಗಳ ತಂಡಗಳು ಇಲ್ಲಿ ಪ್ರಶಸ್ತಿಗಾಗಿ ಸೆಣಸಿದವು. ಮಹಿಳಾ ತಂಡಗಳಿಗೆ ಪ್ರತ್ಯೇಕವಾದ ಟೂರ್ನಿ ನಡೆಯಿತು. ಒಟ್ಟಾರೆ, 250ಕ್ಕೂ ಅಧಿಕ ಕ್ರೀಡಾಪಟುಗಳು ಇಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದರು.

ಅಂತಿಮವಾಗಿ, ಪ್ಲಾಂಟರ್ಸ್ ಕ್ಲಬ್ ಬಿಳಿಗೇರಿ ಚಾಂಪಿಯನ್ ಆಗಿ ಹೊರ ಹೊಮ್ಮಿತು. ಎಲೈಟ್ ಕ್ರಿಕೆಟ್ ಕ್ಲಬ್ 2ನೇ ಸ್ಥಾನ ಹಾಗೂ ಅಮರ ಸುಳ್ಯ 3ನೇ ಸ್ಥಾನ ಪಡೆಯಿತು.

ಮಹಿಳಾ ಕ್ರಿಕೆಟ್ನಲ್ಲಿ ಎಲೈಟ್ ಕ್ರಿಕೆಟ್ ಕ್ಲಬ್ ಮೊದಲ ಸ್ಥಾನ ಪಡೆದರೆ, ಈಗಲ್ ವಾರಿಯರ್ಸ್ ದ್ವಿತೀಯ ಹಾಗೂ ಬ್ಲಾಕ್ ಪ್ಯಾಂಥರ್ಸ್ ತೃತೀಯ ಸ್ಥಾನ ಪಡೆದವು.

ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಗೌಡ ಯುವ ವೇದಿಕೆ ಅಧ್ಯಕ್ಷ ಪಾಣತ್ತಲೆ ಜಗದೀಶ ಮಂದಪ್ಪ ಅಧ್ಯಕ್ಷತೆ ವಹಿಸಿದ್ದರು. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಮೂಟೇರ ಪುಷ್ಪಾವತಿ ರಮೇಶ್ ಭಾಗಿಯಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.