ಶನಿವಾರ, ಜುಲೈ 31, 2021
24 °C
ಇದುವರೆಗೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರು 68 ಮಂದಿ

ಮಡಿಕೇರಿ: 15 ಹೊಸ ಕೋವಿಡ್–‌ 19 ಪ್ರಕರಣ ಪತ್ತೆ, 113 ಸಕ್ರಿಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಜಿಲ್ಲೆಯಲ್ಲಿ ಸೋಮವಾರವೂ ಹೊಸದಾಗಿ 15 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 184ಕ್ಕೇರಿದೆ. ಕೊಡಗು ಜಿಲ್ಲೆಯಲ್ಲಿ ಒಟ್ಟು 113 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 68 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿರುವುದು ಆಶಾದಾಯಕ ಬೆಳವಣಿಗೆ.

ಸೋಮವಾರಪೇಟೆ ತಾಲ್ಲೂಕು, ಕೊಡ್ಲಿಪೇಟೆ ಹೋಬಳಿಯ ನೀರುಗುಂದ ಗ್ರಾಮದ ಜ್ವರ ಲಕ್ಷಣವಿದ್ದ 36 ವರ್ಷದ ಪುರುಷನಿಗೆ ಸೋಂಕು ತಗುಲಿದೆ. 

ಕಾರೆಕೊಪ್ಪದ ಜ್ವರ ಲಕ್ಷಣಗಳಿದ್ದ 41 ವರ್ಷದ ಮಹಿಳೆಗೆ, ಕಕ್ಕೆಹೊಳೆಯ ಜ್ವರ ಲಕ್ಷಣಗಳಿದ್ದ 25 ವರ್ಷದ ಮಹಿಳೆಗೂ ಸೋಂಕು ದೃಢಪಟ್ಟಿದೆ.

ಶನಿವಾರಸಂತೆ ಹೋಬಳಿ ಗೋಪಾಲಪುರ ನಿವಾಸಿ ಜ್ವರ ಲಕ್ಷಣಗಳಿದ್ದ 25 ವರ್ಷದ ಪುರುಷನಲ್ಲಿ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ಗೊತ್ತಾಗಿದೆ. 

ಸೋಮವಾರಪೇಟೆ ತಾಲ್ಲೂಕು, ಚೇರಳ ಶ್ರೀಮಂಗಲದ ಜ್ವರ ಲಕ್ಷಣಗಳಿದ್ದ 62 ವರ್ಷದ ಪುರುಷರೊಬ್ಬರಿಗೆ ಸೋಂಕು ಇದೆ. ಸುಂಟಿಕೊಪ್ಪದ ಎಮ್ಮೆಗುಂಡಿ ರಸ್ತೆಯ ಜ್ವರ ಲಕ್ಷಣಗಳಿದ್ದ 59 ವರ್ಷದ ಪುರುಷರಲ್ಲೂ ಸೋಂಕು ದೃಢಪಟ್ಟಿದ್ದು ಈ ಭಾಗದಲ್ಲಿ ಆತಂಕ ಹೆಚ್ಚಿದೆ.

ಮಡಿಕೇರಿಯ ಗದ್ದುಗೆ ಬಳಿಯ 28 ವರ್ಷದ ಪುರುಷರೊಬ್ಬರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ. ಕುಶಾಲನಗರದ ಬೈಚನಹಳ್ಳಿಯ ಜ್ವರ ಲಕ್ಷಣಗಳಿದ್ದ 25 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ಕುಶಾಲನಗರದ ಕೋಣಮಾರಿಯಮ್ಮ ದೇವಸ್ಥಾನ ಬಳಿಯ 56 ವರ್ಷದ ಮಹಿಳೆಗೆ ಸೋಂಕು ತಗುಲಿದೆ. ಶನಿವಾರಸಂತೆ ಹೋಬಳಿ, ಗೋಪಾಲಪುರ ನಿವಾಸಿ ಬೆಂಗಳೂರು ಪ್ರಯಾಣದ ಇತಿಹಾಸ ಇರುವ 24 ವರ್ಷದ ಪುರುಷರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 22 ವರ್ಷದ ಮಹಿಳೆಗೂ ಸೋಂಕು ತಗುಲಿರುವುದು ವರದಿಯಿಂದ ತಿಳಿದುಬಂದಿದೆ.

ತೊರೆನೂರು ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 85 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ವಿರಾಜಪೇಟೆ ತಾಲ್ಲೂಕು, ಗೋಣಿಕೊಪ್ಪದ ಅರವತ್ತೊಕ್ಲುವಿನ ಮೈಸೂರಮ್ಮ ಕಾಲೊನಿಯ 18 ವರ್ಷದ ಯುವಕ ಹಾಗೂ ಸೋಮವಾರಪೇಟೆ ತಾಲ್ಲೂಕು ಕಂಡಕೆರೆ, ಚೆಟ್ಟಳ್ಳಿ ಗ್ರಾಮದ ಆರೋಗ್ಯ ಕಾರ್ಯಕರ್ತರೊಬ್ಬರ 18 ವರ್ಷದ ಮಗನಿಗೆ ಸೋಂಕು ದೃಢಪಟ್ಟಿದೆ.

ಕುಶಾಲನಗರದ ಬಲಮುರಿ ದೇವಸ್ಥಾನ ಬಳಿಯ 36 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಪ್ರತಿನಿತ್ಯವೂ ಪ್ರಕರಣಗಳು ವರದಿಯಾಗುತ್ತಿದ್ದು ಆತಂಕ ಹೆಚ್ಚಿಸಿದೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು