ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ | 15 ವರ್ಷದ ಬಾಲಕಿ ಕೊಲೆ; ಬಾಲಕಿಯ ರುಂಡದೊಂದಿಗೆ ಆರೋಪಿ ಪರಾರಿ

Published 10 ಮೇ 2024, 2:31 IST
Last Updated 10 ಮೇ 2024, 2:31 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ‌ ಸೋಮವಾರಪೇಟೆ ತಾಲ್ಲೂಕಿನ ಮುಟ್ಲು ಗ್ರಾಮದಲ್ಲಿ 15 ವರ್ಷದ ಬಾಲಕಿಯೊಬ್ಬಳ ರುಂಡ ಕಡಿದ ಪ್ರಕಾಶ್ (32) ಎಂಬಾತ ಗುರುವಾರ ರಾತ್ರಿ ರುಂಡದೊಂದಿಗೆ ಪರಾರಿಯಾಗಿದ್ದಾ‌ನೆ.

'ಬಾಲಕಿಗೂ ಆರೋಪಿಗೂ ಮದುವೆ ನಿಶ್ಚಿತಾರ್ಥ ಗುರುವಾರ ನಡೆಯುತ್ತಿದ್ದ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಡೆದು ಬಾಲ್ಯ ವಿವಾಹ ಮಾಡಬಾರದು ಎಂದು ಪೋಷಕರ ಮನವೊಲಿಸಿದ್ದಾರೆ. ನಂತರ ರಾತ್ರಿ ಮನೆಗೆ ನುಗ್ಗಿದ ಆರೋಪಿಯು ಬಾಲಕಿಯನ್ನು ಅಪಹರಿಸಿದ್ದಾನೆ.‌ ಕಾಡಂಚಿನ ಪ್ರದೇಶದಲ್ಲಿ ಬಾಲಕಿಯನ್ನು‌ ಕೊಂದು ರುಂಡದೊಂದಿಗೆ ಪರಾರಿಯಾಗಿದ್ದಾನೆ. ಬಾಲಕಿಯ ಮುಂಡ ಮಾತ್ರ ಸಿಕ್ಕಿದ್ದು ಆರೋಪಿಗಾಗಿ ಹಾಗೂ ದೇಹದ ಉಳಿದ ಭಾಗಗಳಿಗಾಗಿ ಹುಡುಕಾಟ ನಡೆದಿದೆ. ಸಮೀಪದ ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಗುರುವಾರವಷ್ಟೇ ಉತ್ತೀರ್ಣಳಾಗಿದ್ದಳು. ಆ ಶಾಲೆಯಲ್ಲಿದ್ದ ಏಕೈಕ ವಿದ್ಯಾರ್ಥಿನಿ‌ ಈಕೆ ಆಗಿದ್ದಳು' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

ಘಟನೆಯಲ್ಲಿ ಬಾಲಕಿಯ ತಾಯಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ವಿಚಾರಣೆ ಮಾಡಿದ ಬಳಿಕ ಕೃತ್ಯಕ್ಕೆ ಖಚಿತ ಕಾರಣ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕಾಶ್

ಪ್ರಕಾಶ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT