ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

19ರಂದು ಚೌಡೇಶ್ವರಿ ವಾರ್ಷಿಕ ವರ್ಧಂತಿ

Published 16 ಜೂನ್ 2024, 4:49 IST
Last Updated 16 ಜೂನ್ 2024, 4:49 IST
ಅಕ್ಷರ ಗಾತ್ರ

ಕುಶಾಲನಗರ: ಪಟ್ಟಣದ ರಥ ಬೀದಿಯಲ್ಲಿರುವ ಚೌಡೇಶ್ವರಿ ದೇವಸ್ಥಾನದಲ್ಲಿ ಜೂನ್ 19ರಂದು ಬುಧವಾರ ಚೌಡೇಶ್ವರಿ ಅಮ್ಮನ ವಾರ್ಷಿಕ ವರ್ಧಂತಿ ಅದ್ದೂರಿಯಾಗಿ ನಡೆಯಲಿದೆ.

ಇಲ್ಲಿನ ಚೌಡೇಶ್ವರಿ ದೇವಸ್ಥಾನ ಸಮಿತಿ ಹಾಗೂ ದೇವಾಂಗ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯು ಅಮ್ಮನವರ ಉತ್ಸವ ನಡೆಯಲಿದ್ದು, ಅಂದು ಬೆಳಿಗ್ಗೆ 5 ಗಂಟೆಗೆ ಗಣಪತಿ ಹೋಮ, ಧ್ವಜಾರೋಹಣ, ನಂತರ ಕಾವೇರಿ ನದಿಯಲ್ಲಿ ಗಂಗೆ ಪೂಜೆ ನೆರವೇರಿಸಿ ಮಹಿಳೆಯರು ಪೂರ್ಣಕುಂಭ ಕಲಶ ಹೊತ್ತು ಮಂಗಳವಾದ್ಯದೊಂದಿಗೆ ಮೆರವಣಿಗೆ ಮೂಲಕ ದೇವಾಲಯಕ್ಕೆ ಆಗಮಿಸಲಿದ್ದಾರೆ.

ಈ ಸಂದರ್ಭ ವೀರಗಾಸೆ ನೃತ್ಯ ಮೆರುಗು ನೀಡಲಿದೆ. ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಾಗಿ ದೇವಸ್ಥಾನಕ್ಕೆ ಬಂದು ಅಂತ್ಯಗೊಳ್ಳಲಿದೆ. ನಂತರ ದೇವಿಗೆ ಪೂಜಾ ವಿಧಿಗಳು ಹಾಗೂ ಮಹಾಮಂಗಳಾತಿ ನಂತರ ಪ್ರಸಾದ ವಿನಿಯೋಗ ನಡೆಯಲ್ಲಿದೆ ಎಂದು ದೇವಾಂಗ ಸಂಘದ ಅಧ್ಯಕ್ಷ ಡಿ.ವಿ. ರಾಜೇಶ್ ತಿಳಿಸಿದ್ದಾರೆ.

ಸಂಜೆ 6ಗಂಟೆಗೆ ವಿದ್ಯುತ್ ಅಲಂಕೃತ ಭವ್ಯ ಮಂಟಪದಲ್ಲಿ ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ವೀರಗಾಸೆ ನೃತ್ಯ, ಮತ್ತು ಮಂಗಳವಾದ್ಯದೊಂದಿಗೆ ದೇವಿಯ ಉತ್ಸವದ ಮೆರವಣಿಗೆ ನಗರ ಪ್ರಮುಖ ಬೀದಿಗಳಲ್ಲಿ ಸಾಗಲಿದೆ ಎಂದು ಶ್ರೀ ಚೌಡೇಶ್ವರಿ ದೇವಸ್ಥಾನ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT